ಅರ್ಜಿ ಆಹ್ವಾನ 


ಮಡಿಕೇರಿ ಆ.06(ಕರ್ನಾಟಕ ವಾರ್ತೆ):-ಪ್ರಸಕ್ತ(2019-20ನೇ ಸಾಲಿಗೆ ಶಾಲಾ ಶಿಕ್ಷಕರಿಂದ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಪರಿಷ್ಕøತ ವೇಳಾಪಟ್ಟಿಯಂತೆ ಆಗಸ್ಟ್, 20 ಕೊನೆಯ ದಿನವಾಗಿದೆ. ಆದ್ದರಿಂದ ಆಸಕ್ತ ಮತ್ತು ಅರ್ಹ ಶಿಕ್ಷಕರು ತಮ್ಮ ಪರಿಪೂರ್ಣ ಅರ್ಜಿಯ ಪ್ರತಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಡಿಕೇರಿ ಇವರಿಗೆ ಸಲ್ಲಿಸುವಂತೆ ಮಡಿಕೇರಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಅವರು ತಿಳಿಸಿದ್ದಾರೆ. ಆ.07 ರಂದು ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ ಪ್ರಸಕ್ತ(2019-20) ಸಾಲಿನ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ವತಿಯಿಂದ ಕೊಡಗು ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯು ಆಗಸ್ಟ್, 07 ರಂದು ಬೆಳಗ್ಗೆ 10 ಗಂಟೆಗೆ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಕಚೇರಿಯ ದೂರವಾಣಿ ಸಂಖ್ಯೆ: 08272-228985 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.