ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ:ಜಿಲ್ಲಾ ಪಂಚಾಯತ್ ಸದಸ್ಯೆ.ಎಂ.ಬಿ‌ ಸುನಿತಾ ಮಂಜುನಾಥ್ : ಚೆಟ್ಟಳ್ಳಿ ಕ್ಲಸ್ಟರ್ ಮಟ್ಟದ‌ ಪ್ರತಿಭಾ ಕಾರಂಜಿ 

No comments

ಚೆಟ್ಟಳ್ಳಿ: ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಮುಕ್ತವಾಗಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಸಮಾಜಕ್ಕೆ ಪರಿಚಯಿಸಿಬೇಕು ಎಂದು ವಾಲ್ನೂರು-ತ್ಯಾಗತ್ತೂರು ಜಿಲ್ಲಾ ಪಂಚಾಯತ್ ಸದಸ್ಯೆ ಎಂ.ಬಿ ಸುನಿತಾ ಮಂಜುನಾಥ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಂಡಕರೆ ಇವರ ಆಶ್ರಯದಲ್ಲಿ ಚೆಟ್ಟಳ್ಳಿ ಪ್ರಾಥಮಿಕ ಶಾಲೆಯಲ್ಲಿ ನಡೆದ "ಚೆಟ್ಟಳ್ಳಿ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಹಾಗೂ ಪ್ರೌಡ ಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಎಲ್ಲಾ ರಂಗದಲ್ಲಿ ಭಾಗವಹಿಸಿ ಪ್ರತಿಭೆಯನ್ನು ಪ್ರದರ್ಶಿಸಿಲು ಮುಕ್ತ ಅವಕಾಶವಿದೆ. ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ , ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿ ಅಂತಹ ಕಾರ್ಯಕ್ರಮ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಳ್ಳಬೇಕು ಎಂದರು. ತಾಲ್ಲೂಕು ಪಂಚಾಯತ್ ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ತಮಗೆ ವಿದ್ಯೆ ನೀಡಿದ ಗುರುಗಳನ್ನು ಮರೆಯುತ್ತಿರುವುದು ವಿಷಾದ ಸಂಗತಿಯಾಗಿದೆ. ವಿದ್ಯಾರ್ಥಿಗಳು ಶಿಕ್ಷಕರಿಗೆ ಗೌರವ ನೀಡುತ್ತಿಲ್ಲ, ಅಲ್ಲದೇ ತಮ್ಮ ಶಿಕ್ಷಕರ ಮುಂದೆಯೇ ಕೆಟ್ಟ ರೀತಿಯಲ್ಲಿ ನಡೆಯುತ್ತಿರುವುದ ತುಂಬಾ ನೋವಿನ‌ ವಿಷಯವಾಗಿದೆ ಎಂದರು.

 ವಿದ್ಯಾರ್ಥಿಗಳಿಗೆ ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ ಸರ್ಕಾರಗಳು ಎಲ್ಲಾ ವಿದ್ಯಾರ್ಥಿಗಳ ಕಲಿಕೆಗೆ ಬೇಕಾದ ಹಲವಾರು ಯೋಜನೆಗಳನ್ನು ಜಾರಿ ತಂದಿದೆ, ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು. ಬಿ.ಆರ್. ಸಿ ರಂಗನಾಥ್ ಮಾತಾನಾಡಿ ಎಲ್ಲಾ ವಿದ್ಯಾರ್ಥಿಗಳಲ್ಲಿ ಒಂದಲ್ಲಾ ಒಂದು ರೀತಿಯ ಪ್ರತಿಭೆ ಅಡಗಿದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಪೋಷಕರು, ಶಿಕ್ಷಕರು ಮಾಡಬೇಕಿದೆ ಎಂದರು. ಚೆಟ್ಟಳ್ಳಿ ಕ್ಲಸ್ಟರ್ಗೆ ಒಳಪಡುವ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ೧೦೦ ಕ್ಕೂ ಹೆಚ್ಚು ಅಧಿಕ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯ ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಂಡಕರೆ ಪ್ರಾಥಮಿಕ ಶಾಲಾ ಎಸ್‌‌.ಡಿ.ಎಂ.ಸಿ‌ ಅಧ್ಯಕ್ಷರಾದ ಪ್ರೇಮಕುಮಾರಿ ವಹಿಸಿದ್ದರು. ಚೆಟ್ಟಳ್ಳಿ ಕ್ಲಸ್ಟರ್ ಅಶೋಕ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಕಂಡಕರೆ ಶಾಲಾ ಮುಖ್ಯ ಶಿಕ್ಷಕ ಧನು ಪ್ರಕಾಶ್ ಸ್ವಾಗತಿಸಿ, ಚೆಟ್ಟಳ್ಳಿ ಶಾಲಾ ಮುಖ್ಯ ಶಿಕ್ಷಕಿ ವಿಶಲಾಕ್ಷಿ ವಂದಿಸಿದರು. ಈ ಸಂದರ್ಭ ವೇದಿಕೆಯಲ್ಲಿ ಗ್ರಾಮ‌ ಪಂಚಾಯತಿ ಸದಸ್ಯೆ ಸಿಂಧೂ, ಪತ್ರಕರ್ತ ಇಸ್ಮಾಯಿಲ್ ಕಂಡಕರೆ , ಶಿಕ್ಷಕರಾದ ಶಕುಂತಲಾ ,‌ಜೆನಿತಾ, ಅಶ್ರಫ್ ಇದ್ದರು.

No comments

Post a Comment