ಮಡಿಕೇರಿ ಆ.30(TOC ಕೊಡಗು):-ಕಳೆದ 35 ವರ್ಷಗಳಿಂದ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕಿನ(ನಬಾರ್ಡ್) ವಿವಿಧ ಹಂತದ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ವಯೋನಿವೃತ್ತಿ ಹೊಂದಿದ ಮುಂಡಂಡ ಸಿ.ನಾಣಯ್ಯ ಅವರಿಗೆ ಶುಕ್ರವಾರ ಆತ್ಮೀಯ ಹಾಗೂ ಹೃದಯ ಸ್ಪರ್ಶಿಯಾಗಿ ಸನ್ಮಾನಿಸಲಾಯಿತು. ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಆರ್.ಕೆ.ಬಾಲಚಂದ್ರ, ಕಾರ್ಪೋರೇಷನ್ ಬ್ಯಾಂಕಿನ ಮೈಸೂರು ವಲಯದ ಸಿ.ವಿ.ಮಂಜುನಾಥ್ ಇತರರು ಶಾಲೂ, ಫಲ ತಾಂಬೂಲ ನೀಡಿ ಮುಂಡಂಡ ಸಿ.ನಾಣಯ್ಯ ಅವರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೆ.ಜಿ.ಬೋಪಯ್ಯ ಅವರು ನಬಾರ್ಡ್ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಸೇತುವೆ, ರಸ್ತೆ ಹೀಗೆ ಹಲವು ಯೋಜನೆಗಳನ್ನು ಜಿಲ್ಲೆಗೆ ತಂದು ಅಭಿವೃದ್ಧಿ ಕಾರ್ಯಕ್ರಮಗಳನ್ನು ಮುಂಡಂಡ ಸಿ.ನಾಣಯ್ಯ ಅವರು ಕೈಗೊಂಡಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಸಿಕ್ಕಿರುವ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಂಡು ಪ್ರಾಮಾಣಿಕವಾಗಿ ಹಾಗೂ ಶ್ರದ್ಧೆಯಿಂದ ಕಾರ್ಯನಿರ್ವಹಿಸಿದ್ದಾರೆ ಎಂದು ಕೆ.ಜಿ.ಬೋಪಯ್ಯ ಅವರು ಹೇಳಿದರು. ಮುಂಡಂಡ ಸಿ.ನಾಣಯ್ಯ ಅವರು ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಗ್ರಾಮೀಣ ಪ್ರದೇಶದ ಜನರಿಗೆ ಮಾಹಿತಿ ನೀಡಿ ಸಾರ್ವಜನಿಕ ವಲಯದಲ್ಲಿ ಗುರುತಿಸುವ ಕೆಲಸ ಮಾಡಿದ್ದಾರೆ. ಇವರ ನಿವೃತ್ತಿ ಜೀವನ ಸಂತಸವಾಗಿರಲಿ ಎಂದು ಕೆ.ಜಿ.ಬೋಪಯ್ಯ ಅವರು ಆಶಿಸಿದರು. ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಮಾತನಾಡಿ ‘ಬ್ಯಾಂಕುಗಳು ಮತ್ತು ಸಾರ್ವಜನಿಕರ ನಡುವೆ ಮುಂಡಂಡ ಸಿ.ನಾಣಯ್ಯ ಅವರು ಸೇತುವೆಯಾಗಿ ಕಾರ್ಯನಿರ್ವಹಿಸಿದ್ದಾರೆ’ ಎಂದು ಶ್ಲಾಘಿಸಿದರು. ಕೊಡಗು ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಸಾಲ ಸೌಲಭ್ಯಗಳನ್ನು ಕೊಡಿಸಿದ್ದಾರೆ. ಬಡ ಜನರಿಗೆ ಸಾಕಷ್ಟು ಸಹಕಾರ ನೀಡಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ನಾಣಯ್ಯ ಅವರು ನಿವೃತ್ತರಾದರೂ ಸಹ ಸಮಾಜ ಸೇವೆ ಮುಂದುವರಿಸಬೇಕು. ಜನರ ಜೊತೆ ನಿರಂತರ ಸಂಪರ್ಕ ಮುಂದುವರಿಸುವಂತಾಗಬೇಕು ಎಂದು ಅಪ್ಪಚ್ಚುರಂಜನ್ ಅವರು ನುಡಿದರು. ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ ಅವರು ಮಾತನಾಡಿ ನಬಾರ್ಡ್ ಕಾರ್ಯಕ್ರಮಗಳನ್ನು ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಮುಂಡಂಡ ಸಿ.ನಾಣಯ್ಯ ಅವರ ಕಾಳಜಿ ಮತ್ತು ಉತ್ಸುಕತೆ ಮೆಚ್ಚಬೇಕಿದೆ ಎಂದರು. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಸ್ವತಃ ಮುಂದೆ ಬಂದು ಮಾಹಿತಿ ನೀಡುತ್ತಿದ್ದರು. ಸದಾ ಕ್ರೀಯಾಶೀಲತೆ ಮತ್ತು ಚಟುವಟಿಕೆಯಿಂದ ಬ್ಯಾಂಕ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು. ನಾಣಯ್ಯ ಅವರು ಇಷ್ಟು ಬೇಗ ನಿವೃತ್ತಿ ಹೊಂದುತ್ತಿರುವುದು ನಂಬಲು ಸಾಧ್ಯವಾಗುತ್ತಿಲ್ಲ ಎಂದರು. ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಆರ್.ಕೆ.ಬಾಲಚಂದ್ರ ಅವರು ಮಾತನಾಡಿ 1984 ರಿಂದ ನಬಾರ್ಡ್‍ನಲ್ಲಿ ವಿವಿಧ ಹಂತದ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಮಂಗಳೂರು, ಬೆಂಗಳೂರು, ಮುಂಬಯಿ ಹಾಗೂ ಕೊಡಗು ಜಿಲ್ಲೆಯಲ್ಲಿ ಸೇವೆ ಸಲ್ಲಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮುಂಡಂಡ ಸಿ.ನಾಣಯ್ಯ ಅವರ ಸಲಹೆ, ಮಾರ್ಗದರ್ಶನ ನಿರಂತರವಾಗಿರಲಿ ಎಂದರು. ಖಾದಿ ಮತ್ತು ಗಾಮೋದ್ಯೋಗ ಮಂಡಳಿಯ ವ್ಯವಸ್ಥಾಪಕರಾದ ಶಾಂತಿ ಅವರು ಮಹಾತ್ಮ ಗಾಂಧೀಜಿಯವರ ಕಂಚಿನ ಪುತ್ಥಳಿ ಹಾಗೂ ಶಾಲು ನೀಡಿ ಮುಂಡಂಡ ಸಿ.ನಾಣಯ್ಯ ಅವರನ್ನು ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಮುಂಡಂಡ ಸಿ.ನಾಣಯ್ಯ ಅವರು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್‍ನ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಮಂಗಳೂರು ಸಂಸ್ಥೆಯಲ್ಲಿ ಹಲವರಿಗೆ ತರಬೇತಿ ನೀಡಿ ರಾಷ್ಟ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲು ಪ್ರಯತ್ನಿಸಲಾಗಿದೆ ಎಂದು ಸ್ಮರಿಸಿದರು. ಬೆಂಗಳೂರು, ಮುಂಬಯಿ ಮತ್ತು ಮಂಗಳೂರಿನಲ್ಲಿ ಕಾರ್ಯನಿರ್ವಹಿಸಿ ಜೊತೆಗೆ ಕೊಡಗು ಜಿಲ್ಲೆಯಲ್ಲಿ 2013ರ ಮೇ ಯಿಂದ ನಬಾರ್ಡ್‍ನ ಜಿಲ್ಲಾ ಅಭಿವೃದ್ಧಿ ಉಪ ಮಹಾ ಪ್ರಬಂಧಕರಾಗಿ ಕಾರ್ಯನಿರ್ವಹಿಸಿ ನಬಾರ್ಡ್‍ನ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಪ್ರಯತ್ನಿಸಲಾಗಿದೆ ಎಂದು ಅವರು ನುಡಿದರು. ಜಿಲ್ಲೆಯ ಕೃಷಿಕರು, ಕಾರ್ಮಿಕರು, ಸ್ವಯಂ ಉದ್ಯೋಗ ಕೈಗೊಳ್ಳುವವರು, ಬಡವರಿಗೆ ಬ್ಯಾಂಕ್‍ಗಳ ಮೂಲಕ ಸಾಲ ಸೌಲಭ್ಯಗಳನ್ನು ತಲುಪಿಸಲು ಪ್ರಯತ್ನಿಸಲಾಗಿದೆ. 2013 ರಲ್ಲಿ 1200 ಕೋಟಿ ರೂ. ಕೃಷಿಕರಿಗೆ ಮತ್ತು ಇತರರಿಗೆ ಸಾಲ ನೀಡಲಾಗುತ್ತಿತ್ತು, ಇಂದು 2700 ಕೋಟಿ ರೂ. ಸಾಲ ನೀಡುವ ಹಂತಕ್ಕೆ ತಲುಪಲಾಗಿದೆ. ಈ ರೀತಿ ಬ್ಯಾಂಕುಗಳ ಮೂಲಕ ಕೃಷಿ ಹಾಗೂ ಇತರ ಆದ್ಯತಾ ವಲಯಕ್ಕೆ ಸಾಲ ಸೌಲಭ್ಯವನ್ನು ತಲುಪಿಸಲು ಪ್ರಯತ್ನಿಸಲಾಗಿದೆ ಎಂದರು. ಜಿಲ್ಲೆಯ ಕೃಷಿಕರು, ಸ್ವಯಂ ಉದ್ಯೋಗ ಕೈಗೊಳ್ಳುವವರು, ಬಡಜನರ ಕಣ್ಣೀರು ಒರೆಸುವ ಕಾರ್ಯ ಸ್ವಲ್ಪಮಟ್ಟಿಗಾದರೂ ಮಾಡಲಾಗಿದೆ. ಸಕಾಲದಲ್ಲಿ ಸರ್ಕಾರದ ಯೋಜನೆಗಳನ್ನು ಜನರ ಬಾಗಿಲಿಗೆ ಕೊಂಡೊಯ್ಯಲು ಪ್ರಯತ್ನಿಸಲಾಗಿದೆ ಎಂದರು. ನಿವೃತ್ತಿ ಹೊಂದಿದ್ದರೂ ಸಹ ಸಾಮಾನ್ಯ ಸೇವಕನಂತೆ ಕಾರ್ಯನಿರ್ವಹಿಸಲು ಸದಾ ಸಿದ್ದನಿದ್ದೇನೆ ಎಂದು ಅವರು ಹೇಳಿದರು.
ಮುಂಡಂಡ ಸಿ.ನಾಣಯ್ಯಗೆ ಹೃದಯಸ್ಪರ್ಶಿ ಸನ್ಮಾನ

No comments
Post a Comment