ನಾಳೆ ಕೊಡಗು ಜಿಲ್ಲೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭೇಟಿ.

No comments

ಮಡಿಕೇರಿ -ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಗಸ್ಟ್, 29 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. 
ಮಾನ್ಯ ಮುಖ್ಯಮಂತ್ರಿ ಅವರು ಆಗಸ್ಟ್, 29 ರಂದು ಮಧ್ಯಾಹ್ನ 2.15 ಗಂಟೆಗೆ ಕೂಡಿಗೆ ಸೈನಿಕ ಶಾಲೆಯ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ. ಬಳಿಕ ಜಿಲ್ಲೆಯ ಶಾಸಕರು, ಸಂಸತ್ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ನಂತರ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಹಾಗೂ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯಾಧಿಕಾರಿ ಬಿ.ಪಿ.ಚೆನ್ನಬಸವೇಶ ಅವರು ತಿಳಿಸಿದ್ದಾರೆ.

No comments

Post a Comment