TOC: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಹಿರಿಯ ನಾಗರಿಕರ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯು ಅಕ್ಟೋಬರ್, 01 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವೀರಪ್ಪ ವೀರಭದ್ರಪ್ಪ ಮಲ್ಲಾಪುರ, ಹಿರಿಯ ಸಿವಿಲ್ ನ್ಯಾಯಧೀಶರಾದ ನೂರುನ್ನಿಸ, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಎಸ್.ಎಲ್‍ಭೋಜೇಗೌಡ, ಆಯನೂರು ಮಂಜುನಾಥ್, ಜಿ.ಪಂ. ಅಧ್ಯಕ್ಷರಾದ ಬಿ.ಎ. ಹರೀಶ್, ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸಿ.ಕೆ.ಬೋಪಣ್ಣ, ವಕೀಲರ ಸಂಘದ ಅಧ್ಯಕ್ಷರಾದ ಕೆ.ಎಸ್.ಕವನ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ.ಸಿ.ಇಓ ಕೆ.ಲಕ್ಷೀಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ವಕೀಲರಾದ ಕೆ.ಡಿ.ದಯಾನಂದ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್. ಸಂಪತ್‍ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ರಾಧ ಇತರರು ಪಾಲ್ಗೊಳ್ಳಲಿದ್ದಾರೆ.