ಬೆಂಗಳೂರು(TOC ನ್ಯೂಸ್): ಕರ್ನಾಟಕದ 15 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಬೇಕಿದ್ದ ಉಪ ಚುನಾವಣೆ ದಿನಾಂಕವನ್ನು ಸುಪ್ರೀಂ ಕೋರ್ಟ್ ತಡೆ ಹಿಡಿದಿತ್ತು. ಇದೀಗ ಈ ಕ್ಷೇತ್ರಗಳ ಉಪ ಚುನಾವಣೆಗೆ ಚುನಾವಣಾ ಆಯೋಗ ಮತ್ತೆ ದಿನಾಂಕ ಘೋಷಣೆ ಮಾಡಿದೆ.
ಡಿಸೆಂಬರ್ 5ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 9ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ ಎಂಧು ಚುನಾವಣಾ ಆಯೋಗ ತಿಳಿಸಿದೆ. ನವೆಂಬರ್ 11ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನವೆಂಬರ್ 18 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ.
ನವೆಂಬರ್ 21ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕವಾಗಿದೆ. ಡಿಸೆಂಬರ್ 11ರೊಳಗೆ ಚುನಾವಣಾ ಪ್ರಕ್ರಿಯೆ ಸಂಪೂರ್ಣಗೊಳ್ಳಲಿದೆ ಎಂದು ಆಯೋಗವು ತಿಳಿಸಿದೆ.
