ಮಡಿಕೇರಿ (TOC ನ್ಯೂಸ್):-ಕಾರ್ಯನಿರ್ವಾಹಕ ಎಂಜಿನಿಯರ್(ವಿ), ಸೆಸ್ಕ್. ಚಾ.ವಿ.ಸ.ನಿ.,ನಿ ರವರ ಅಧ್ಯಕ್ಷತೆಯಲ್ಲಿ ವಿರಾಜಪೇಟೆ ಉಪ ವಿಭಾಗದ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ಸೆಪ್ಟೆಂಬರ್, 26 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 11.30 ಗಂಟೆವರೆಗೆ ವಿರಾಜಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ.
ಕಾರ್ಯನಿರ್ವಾಹಕ ಎಂಜಿನಿಯರ್(ವಿ), ಸೆಸ್ಕ್. ಅವರ ಅಧ್ಯಕ್ಷತೆಯಲ್ಲಿ ಮಡಿಕೇರಿ ಉಪ ವಿಭಾಗದ ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಿಸಲು ಸಭೆಯು ಸೆಪ್ಟೆಂಬರ್, 26 ಮಧ್ಯಾಹ್ನ 12 ಗಂಟೆಯಿಂದ ಮಧ್ಯಾಹ್ನ 1.30 ಗಂಟೆವರೆಗೆ ನಗರದ ಉಪ ವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ.
ಮಡಿಕೇರಿ ಹಾಗೂ ವಿರಾಜಪೇಟೆ ವ್ಯಾಪ್ತಿಯ ಸಾರ್ವಜನಿಕರು/ ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಸೋಮಶೇಖರ್ ಅವರು ಕೋರಿದ್ದಾರೆ.
