ಮಡಿಕೇರಿ (TOC ನ್ಯೂಸ್) ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಪ್ರವಾಸೋದ್ಯಮ ಪಾಲುದಾರರು ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಪ್ರವಾಸೋದ್ಯಮ ವಿಭಾಗದ ಸಂಯುಕ್ತಾಶ್ರಯದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಯು ‘ಪ್ರವಾಸೋದ್ಯಮ ಹಾಗೂ ಉದ್ಯೋಗ: ಸರ್ವರಿಗೂ ಉಜ್ವಲ ಭವಿಷ್ಯ’ ಎಂಬ ಸಂದೇಶದೊಂದಿಗೆ ಸೆಪ್ಟೆಂಬರ್, 27 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಆಯನೂರು ಮಂಜುನಾಥ್, ಎಸ್.ಎಲ್.ಭೋಜೇಗೌಡ, ಸಂಸದರಾದ ಪ್ರತಾಪ್ ಸಿಂಹ, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪೆನ್ನೇಕರ್, ಜಿ.ಪಂ.ಸಿ.ಇಒ ಕೆ.ಲಕ್ಷ್ಮೀಪ್ರಿಯಾ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ಎಚ್.ಬಿ.ರಾಘವೇಂದ್ರ ಅವರು ಪಾಲ್ಗೊಳ್ಳಲಿದ್ದಾರೆ.
ಸೆಪ್ಟೆಂಬರ್, 27 ರಂದು ಬೆಳಗ್ಗೆ 7 ಗಂಟೆಗೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಮ್ಯಾರಥಾನ್, ಸೈಕಲ್, ಬೈಕ್‍ರ್ಯಾಲಿ ನಡೆಯಲಿದೆ. ಬೆಳಗ್ಗೆ 8.30ಕ್ಕೆ ಕೋಟೆ ಆವರಣದಲ್ಲಿ ಸ್ವಚ್ಚತಾ ಕಾರ್ಯಕ್ರಮ, ಬೆಳಗ್ಗೆ 10.30ಕ್ಕೆ ಸಭಾ ಕಾರ್ಯಕ್ರಮ ಜರುಗಲಿದೆ.
ಸಂಜೆ 5.30 ಗಂಟೆಯಿಂದ 7.30 ಗಂಟೆಯವರೆಗೆ ನಗರದ ರಾಜಸೀಟ್ ಆವರಣದಲ್ಲಿ ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯವರಿಂದ ಡೊಳ್ಳು ಕುಣಿತ ಹಾಗೂ ಕಂಸಾಳೆ ನಡೆಯಲಿದೆ.
