ಮಡಿಕೇರಿ (TOC ನ್ಯೂಸ್) :-ಪ್ರಸಕ್ತ(2019-20) ಸಾಲಿನ ಕಲಾಶ್ರೀ ಆಯ್ಕೆ ಶಿಬಿರವನ್ನು ವಿವಿಧ ಪ್ರಕಾರಗಳಲ್ಲಿ ನಡೆಸುವುದರೊಂದಿಗೆ, ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದರ ಮೂಲಕ ಅವರಲ್ಲಿ ಆತ್ಮಸ್ಥೈರ್ಯ, ಭರವಸೆ, ದೃಡವಾದ ವ್ಯಕ್ತಿತ್ವ, ವಿಚಾರವಂತಿಕೆ, ಕಲಾಪ್ರತಿಭೆಯನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ಪ್ರತಿಭಾವಂತ ಮಕ್ಕಳಿಗೆ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಬಾಲಭವನ, ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ಮಡಿಕೇರಿ, ಸೋಮವಾರಪೇಟೆ ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ 5 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಸೃಜನಾತ್ಮಕ ಕಲೆ, ಸೃಜನಾತ್ಮಕ ಬರವಣಿಗೆ, ಸೃಜನಾತ್ಮಕ ಪ್ರದರ್ಶನ ಕಲೆ, ವಿಜ್ಞಾನದಲ್ಲಿ ನೂತನ ಆವಿಷ್ಕಾರ ಈ ನಾಲ್ಕು ಚಟುವಟಿಕೆಗಳಲ್ಲಿ ಪ್ರತಿ ತಾಲ್ಲೂಕಿನಿಂದ ತಲಾ 8 ರಂತೆ ಒಟ್ಟು 24 ಮಕ್ಕಳನ್ನು ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಲಾಗಿದ್ದು, ಮೂರು ತಾಲ್ಲೂಕಿನಿಂದ ಆಯ್ಕೆಯಾದ 24 ಮಕ್ಕಳಿಗೆ ಜಿಲ್ಲಾ ಮಟ್ಟದ ಕಲಾಶ್ರೀ ಆಯ್ಕೆ ಶಿಬಿರವು ನವೆಂಬರ್, 05 ರಂದು ಬೆಳಗ್ಗೆ 10.30 ಗಂಟೆಗೆ ಶಿಶು ಕಲ್ಯಾಣ ಸಂಸ್ಥೆಯಲ್ಲಿ ನಡೆಯಲಿದೆ. ಸೃಜನಾತ್ಮಕ ಕಲೆ, ಸೃಜನಾತ್ಮಕ ಬರವಣಿಗೆ, ಸೃಜನಾತ್ಮಕ ಪ್ರದರ್ಶನ ಕಲೆ, ವಿಜ್ಞಾನದಲ್ಲಿ ನೂತನ ಆವಿಷ್ಕಾರ ವಿಭಾಗದಲ್ಲಿ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿದ್ದ ಒಟ್ಟು 24 ಮಕ್ಕಳಲ್ಲಿ 8 ಮಕ್ಕಳನ್ನು ಮಾತ್ರ ಆಯ್ಕೆ ಮಾಡಿ ರಾಜ್ಯ ಮಟ್ಟಕ್ಕೆ ಕಳುಹಿಸಿಕೊಡಲಾಗುವುದು. ರಾಜ್ಯ ಮಟ್ಟದಲ್ಲಿ ನಡೆಯುವ ಕಲಾಶ್ರೀ ಉತ್ಸವದಲ್ಲಿ ಪ್ರತಿ ಜಿಲ್ಲೆಯಿಂದ ತಲಾ 8 ಮಕ್ಕಳಂತೆ ಭಾಗವಹಿಸಲಿದ್ದಾರೆ. ತಾಲ್ಲೂಕು ಮಟ್ಟದಲ್ಲಿ ಭಾಗವಹಿಸುವ ಮಕ್ಕಳು ಪೋಷಕರಿಂದ ಅನುಮತಿ ಪತ್ರ, ಓದುತ್ತಿರುವ ಶಾಲೆಯ ಮುಖ್ಯಸ್ಥರಿಂದ ಅನುಮತಿ ಪತ್ರ, ವಯಸ್ಸಿನ ದೃಢೀಕರಣ ಪತ್ರ, ವ್ಯಾಸಂಗ ದೃಢೀಕರಣ ಪತ್ರ, ಪೋಷಕರಿಂದ ಒಪ್ಪಿಗೆ ಪತ್ರ, 4 ಪಾಸ್‍ಪೋರ್ಟ್ ಅಳತೆಯ ಭಾವಚಿತ್ರಗಳನ್ನು ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ನ.05 ರಂದು ಜಿಲ್ಲಾ ಮಟ್ಟದ ಕಲಾಶ್ರೀ ಆಯ್ಕೆ ಶಿಬಿರ