ಮಡಿಕೇರಿ ( TOC ನ್ಯೂಸ್) : ಜಿಲ್ಲಾ ಪಂಚಾಯತ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಭೋದಕ ಆಸ್ಪತ್ರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ, ನೇತ್ರ ಚಿಕಿತ್ಸಾ ವಿಭಾಗ, ಜಿಲ್ಲಾ ಆಸ್ಪತ್ರೆ, ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರ, ಸಂಪಾಜೆ, ಚೆಂಬು, ಪೆರಾಜೆ, ಮದೆನಾಡು ಮತ್ತು ಗಾಳಿಬೀಡು ಗ್ರಾಮ ಪಂಚಾಯತ್, ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ನಿಯಮಿತ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸ್ತ್ರೀಶಕ್ತಿ-ಸ್ವಸಹಾಯ ಸಂಘಗಳ ಒಕ್ಕೂಟ ಮತ್ತು ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಸಂಪಾಜೆ ಅಂಧತ್ವ ನಿವಾರಣಾ ಸಮಿತಿ, ಲಯನ್ಸ್ ಕ್ಲಬ್ ಮತ್ತು ಮಡಿಕೇರಿ ರೋಟರಿ ಮಿಸ್ಟಿಹಿಲ್ಸ್ ಇವರ ಸಂಯುಕ್ತ ಆಶ್ರಯದಲ್ಲಿ ದಿ.ಬಾಲಚಂದ್ರ ಕಳಗಿಯವರ ಸ್ಮರಣಾರ್ಥವಾಗಿ ಹಾಗೂ 20 ನೇ ವರ್ಷದೃಷ್ಟಿ ದಿನಾಚರಣೆಯ ಅಂಗವಾಗಿ 11 ನೇ ವರ್ಷದ ನೇತ್ರ ಪರೀಕ್ಷೆ ಮತ್ತು ಕಣ್ಣು ಪೊರೆ ಶಸ್ತ್ರ ಚಿಕಿತ್ಸಾ ಶಿಬಿರವು ಅಕ್ಟೋಬರ್, 23 ರಂದು ಬೆಳಗ್ಗೆ 9.30 ಗಂಟೆಗೆ ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ.
ಸಂಪಾಜೆ ಗ್ರಾ.ಪಂ.ಅಧ್ಯಕ್ಷರಾದ ಕುಮಾರ್ ಚೆದ್ಕಾರ್, ಸಂಪಾಜೆ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲಯನ್ ಕಿಶೋರ್ ಕುಮಾರ್ ಪಿ.ಬಿ., ಸಂಪಾಜೆ ಅಂಧತ್ವ ನಿವಾರಣಾ ಸಮಿತಿಯ ಅಧ್ಯಕ್ಷರಾದ ಎನ್.ಎಸ್.ದೇವಿಪ್ರಸಾದ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಮೋಹನ್ ಇತರರು ಪಾಲ್ಗೊಳ್ಳಲಿದ್ದಾರೆ.

No comments
Post a Comment