ನವದೆಹಲಿ (TOC ನ್ಯೂಸ್): ಪ್ರವಾಹ ಪೀಡಿತ ಬಿಹಾರ ಮತ್ತು ಕರ್ನಾಟಕ ರಾಜ್ಯಗಳಿಗೆ ಮಧ್ಯಂತರ ಪರಿಹಾರ ಹಣವನ್ನಾಗಿ ಬಿಹಾರಕ್ಕೆ 400 ಕೋಟಿ ರೂ. ಮತ್ತು ಕರ್ನಾಟಕಕ್ಕೆ 1200 ಕೋಟಿ ರೂ. ಅನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮತಿ ನೀಡಿದೆ.
ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಜನರ ತೀವ್ರ ಆಕ್ರೋಶವನ್ನು ರಾಜ್ಯ ಸರ್ಕಾರ ಮತ್ತು ರಾಜ್ಯದ ಬಿಜೆಪಿ ಸಂಸದರು ಎದುರಿಸಿದ್ದರು. ಗುರುವಾರ ಟ್ವಿಟರ್ನಲ್ಲಿ #NotFairModiji, #Stopurarrogancedvs ಎಂಬಿತ್ಯಾದಿ ಹ್ಯಾಷ್ ಟ್ಯಾಗ್ ಬಳಸಿ ಜನ ಆಕ್ರೋಶ ವ್ಯಕ್ತಪಡಿಸಿದ್ದರು.

No comments
Post a Comment