ರಾಷ್ಟ್ರೀಯ ಏಕತಾ ದಿನ’ದ ಪ್ರಯುಕ್ತ ಐಕ್ಯತಾ ಓಟ


ಮಡಿಕೇರಿ (TOC ನ್ಯೂಸ್): ‘ರಾಷ್ಟ್ರೀಯ ಏಕತಾ ದಿನ’ದ ಪ್ರಯುಕ್ತ ಜಿಲ್ಲಾ ಪೊಲೀಸ್ ವಿಭಾಗದಿಂದ ನಗರದಲ್ಲಿ ಐಕ್ಯತಾ ಓಟ ಜರುಗಿತು. ನಗರದ ರಾಜಾಸೀಟಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಅವರು ಐಕ್ಯತಾ ಓಟಕ್ಕೆ ಚಾಲನೆ ನೀಡಿದರು. ಐಕ್ಯತಾ ಓಟವು ನಗರದ ರಾಜಾಸೀಟಿನಿಂದ ಆರಂಭವಾಗಿ ಜನರಲ್ ತಿಮ್ಮಯ್ಯ ವೃತ್ತ, ಮಂಗೇರಿರ ಮುತ್ತಣ್ಣ ವೃತ್ತ, ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತ, ಇಂದಿರಾ ಗಾಂಧಿ ವೃತ್ತ ಮೂಲಕ ಕೋಟೆಗೆ ಆಗಮಿಸಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಪ್ರತಿಜ್ಞಾ ವಿಧಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಪಿ.ಸುಮನ್ ಅವರು ಬೋಧಿಸಿದರು.

 


 ಡಿವೈಎಸ್‍ಪಿ ದಿನೇಶ್ ಕುಮಾರ್, ಪ್ರೆಸ್‍ಕ್ಲಬ್ ಅಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ, ಗ್ರೀನ್ ಸಿಟಿ ಫೋರಂ ಸ್ಥಾಪಕ ಅಧ್ಯಕ್ಷರಾದ ಸತ್ಯ, ಅಧ್ಯಕ್ಷರಾದ ಜಯ ಚಿಣ್ಣಪ್ಪ, ಅಂಬೆಕಲ್ ನವೀನ್, ಕೆ.ಟಿ.ಬೇಬಿಮ್ಯಾಥ್ಯು, ಜಿಲ್ಲಾ ಶಸಸ್ತ್ರ ಮೀಸಲು ಪೊಲೀಸ್ ಪಡೆಯ ಅಧಿಕಾರಿ ಸಿದ್ದಯ್ಯ, ಪೊಲೀಸ್ ಅಧಿಕಾರಿಗಳಾದ ದಿವಾಕರ, ಅನೂಪ್ ಮಾದಪ್ಪ, ಮೇದಪ್ಪ, ರೋಟರಿ, ಲಯನ್ಸ್ ಸಂಸ್ಥೆಯ ಪ್ರತಿನಿಧಿಗಳು ಇತರರು ಪಾಲ್ಗೊಂಡಿದ್ದರು.