ಮಡಿಕೇರಿ (TOC NEWS):-ಜಿಲ್ಲಾಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನಗರದ ಕೋಟೆ ಆವರಣದಲ್ಲಿ ಶುಕ್ರವಾರ ಅರ್ಥಪೂರ್ಣವಾಗಿ ಜರುಗಿತು. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಧ್ವಜಾರೋಹಣ ನೆರವೇರಿಸಿದರು. ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ತಾ.ಪಂ.ಅಧ್ಯಕ್ಷರಾದ ತೆಕ್ಕಡೆ ಶೋಭಾ ಮೋಹನ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಿ.ಎಸ್.ಲೋಕೇಶ್ ಸಾಗರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಇತರರು ಪಾಲ್ಗೊಂಡಿದ್ದರು.
ನಗರದ ಗಾಂಧಿ ಮಂಟಪದ ಬಳಿ ಸ್ತಬ್ದಚಿತ್ರ ಮೆರವಣಿಗೆಗೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ್ ಶಿರೋಳಿ, ಪಶುಪಾಲನಾ ಉಪ ನಿರ್ದೇಶಕರಾದ ತಮ್ಮಯ್ಯ, ತೋಟಗಾರಿಕಾ ಇಲಾಖೆ ಉಪ ನಿರ್ದೇಶಕರಾದ ಚಂದ್ರಶೇಖರ್, ಪೌರಾಯುಕ್ತರಾದ ಎಂ.ಎಲ್.ರಮೇಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಎಂ.ಶಿವಕುಮಾರ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಾದ ರಾಘವೇಂದ್ರ ಇತರರು ಚಾಲನೆ ನೀಡಿದರು.





