ಅಲ್ಯೂಮಿನಿಯಂ ಏಣಿಗೆ ವಿದ್ಯುತ್ ತಂತಿ ಸ್ಪರ್ಷ : ನೆಲ್ಯಹುದಿಕೇರಿ ತೋಟದ ಕಾರ್ಮಿಕ ಸಾವು


TOC ಮಡಿಕೇರಿ : ತೋಟದಲ್ಲಿ ಕಾಳುಮೆಣಸು ಕೊಯ್ಯುತ್ತಿದ್ದ ಸಂದರ್ಭ ಅಲ್ಯುಮಿನಿಯಮ್ ಏಣಿಗೆ ವಿದ್ಯುತ್ ತಂತಿ ಸ್ಪರ್ಷಗೊಂಡು ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆಲ್ಯಹುದಿಕೇರಿಯಲ್ಲಿ ನಡೆದಿದೆ . ಬರಡಿ ಗ್ರಾಮದ ಕಾರ್ಮಿಕ ರಾಜನ್ ಎಂಬುವವರೇ ಮೃತ ದುರ್ದೈವಿ .
ಸಿದ್ದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ . ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು .