ಮಡಿಕೇರಿ TOC :- ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಅಕ್ಷಯ ಸಭಾ ಭವನದಲ್ಲಿ ಹಮ್ಮಿಕೊಂಡಿದ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ವಿರಾಜಪೇಟೆ ತಾಲ್ಲೂಕಿನ ಕಾಕೋಟು ಪರಂಬುರವರಾದ ಪಳೆಯಂಡ.ಯು.ರಾಬಿನ್ ದೇವಯ್ಯ ಅವರು ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯ ಉಸ್ತುವಾರಿ ವಿಮಲಾ ಕುಮಾರ್ ಸುರಾನ, ವಿಭಾಗಿಯ ಚುನಾವಣಾ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ಸಹ ಪ್ರಭಾರಿ ಚುನಾವಣಾಧಿಕಾರಿ ಗೋಪಾಲ್ ಕೃಷ್ಣ, ನಿಕಟಪೂರ್ವ ಅಧ್ಯಕ್ಷರಾದ ಬಿ.ಬಿ.ಭಾರತೀಶ್, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಜಿ.ಬೋಪಯ್ಯ, ವಿಧಾನಸಭಾ ಪರಿಷತ್ ಸದಸ್ಯರಾದ ಎಂ.ಪಿ.ಸುನೀಲ್ ಸುಬ್ರಮಣಿ, ಮಾಜಿ ಸದಸ್ಯರಾದ ಎಸ್.ಜಿ.ಮೇದಪ್ಪ, ಮಡಿಕೇರಿ ತಾಲ್ಲೂಕು ಅಧ್ಯಕ್ಷರಾದ ಕಾಂಗೀರ ಸತೀಶ್ (ಆಶ್ವೀನ್), ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷರಾದ ಮನು ಕುಮಾರ್ ರೈ, ವಿರಾಜಪೇಟೆ ತಾಲ್ಲೂಕು ಅಧ್ಯಕ್ಷರಾದ ನೆಲ್ಲೀರ ಚಲನ್ ಕುಮಾರ್, ಮಡಿಕೇರಿ ನಗರ ಅಧ್ಯಕ್ಷರಾದ ಮನು ಮಂಜುನಾಥ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.



No comments
Post a Comment