ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ

No comments
     
ಮಡಿಕೇರಿ TOC:-ಜಿಲ್ಲಾ ಪೊಲೀಸ್ ಸಂಚಾರಿ ನಿರ್ವಹಣೆ ಮತ್ತು ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಸಡಕ್ ಸುರಕ್ಷಾ–ಜೀವನ್ ರಕ್ಷಾ ಎಂಬ ಘೋಷ ವಾಕ್ಯದೊಂದಿಗೆ ಮಂಗಳವಾರ ನಗರದ ಗಾಂಧಿ ಮೈದಾನದಲ್ಲಿ ಡಿವೈಎಸ್‍ಪಿ ಬಾರಿಕೆ ದಿನೇಶ್ ಕುಮಾರ್ ಅವರು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ವಾಹನ ಚಾಲಕರು ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಬೇಕು, ದ್ವಿಚಕ್ರವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಬೇಕು. ಯಾವುದೇ ಕಾರಣಕ್ಕೂ ವಾಹನಗಳನ್ನು ಅತಿ ವೇಗವಾಗಿ ಚಾಲನೆ ಮಾಡಬಾರದು ಮತ್ತು ಚಾಲನೆಯಲ್ಲಿ ಮೊಬೈಲ್ ಫೋನ್ ಬಳಸಬಾರದು. ಈ ಎಲ್ಲಾ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ಅಪಘಾತಗಳನ್ನು ತಡೆಗಟ್ಟಲು ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಹೇಳಿದರು

No comments

Post a Comment