TOC ಮಡಿಕೇರಿ :-ವಿದ್ಯಾರ್ಥಿಗಳು ತಮ್ಮ ಕಲಿಕೆಯೊಂದಿಗೆ ವೈಜ್ಞಾನಿಕ ಚಿಂತನೆ ಬೆಳೆಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಜಿ.ಪಂ. ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್ ಅವರು ಹೇಳಿದರು.
ಸಮಗ್ರ ಶಿಕ್ಷಣ ಕರ್ನಾಟಕ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ (ಬಿ.ಜಿ.ವಿ.ಎಸ್) ವತಿಯಿಂದ ನಗರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6,7 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಏರ್ಪಡಿಸಿರುವ ಜಿಲ್ಲಾ ಮಟ್ಟದ ಮಕ್ಕಳ ವಿಜ್ಞಾನ ಹಬ್ಬದ ಸಮೀಪದ ಕೇಂದ್ರಕ್ಕೆ ಶನಿವಾರ ಭೇಟಿ ನೀಡಿ ಮಕ್ಕಳ ಚಟುವಟಿಕೆ ಪರಿಶೀಲಿಸಿ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿ ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕು ಎಂದು ಅವರು ಹೇಳಿದರು.
ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ ಅವರು ಮಾತನಾಡಿ ಮಕ್ಕಳ ಕಲಿಕಾ ಚಟುವಟಿಕೆಗಳ ಕುರಿತು ಮಕ್ಕಳೊಂದಿಗೆ ಸಂವಾದ ನಡೆಸಿ ಅವರು ಈ ಹಬ್ಬದ ಮೂಲಕ ಮಕ್ಕಳು ಪರಸ್ಪರ ಪ್ರೀತಿ, ವಿಶ್ವಾಸದಿಂದ ಬೆರೆತು ನಾವೆಲ್ಲರು ಒಂದು ಎನ್ನುವ ಮನೊಭಾವನೆ ಬೆಳೆಸಿಕೊಳ್ಳಲು ಸಹಕಾರಿಯಾಗಿದೆ ಎಂದು ಹೇಳಿದರು.
ಜಿ.ಪಂ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸರೋಜಮ್ಮ ಅವರು ಮಾತನಾಡಿ ಮಕ್ಕಳು ಸಂತಸದಿಂದ ಕಲಿಯಲು ಈ ಹಬ್ಬ ಸಹಕಾರಿಯಾಗಿದೆ ಎಂದು ಹೇಳಿದರು. ಹಾಗೆಯೇ ಅವರು ಮಕ್ಕಳೊಂದಿಗೆ ನೃತ್ಯ ಮಾಡುವ ಮೂಲಕ ಗಮನ ಸೆಳೆದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪಿ.ಎಸ್.ಮಚ್ಚಾಡೋ ಅವರು ಮಾತನಾಡಿ ಮಕ್ಕಳ ಹಬ್ಬದಲ್ಲಿ ಮಕ್ಕಳಿಗೆ ಶಿಕ್ಷಕರು ಕಲಿಸುತ್ತಿರುವ ವಿವಿಧ ಚಟುವಟಿಕೆಗಳ ಕುರಿತು ವಿವರಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್.ಗಾಯತ್ರಿ, ಶಿಕ್ಷಣಾಧಿಕಾರಿ ಕಾಶಿನಾಥ್, ಸಂಯೋಜಕಿ ಎಂ.ಜೆ.ಗಂಗಮ್ಮ, ಸಂಪನ್ಮೂಲ ವ್ಯಕ್ತಿಗಳಾದ ಟಿ.ಜಿ.ಪ್ರೇಮ್ ಕುಮಾರ್, ಡಿ.ಚಂದನ್, ಆರ್.ದಿವಾಕರ್, ಡಿ.ಎಂ.ರೇವತಿ, ಪಿ.ಯು.ರಂಜಿತ್, ಸುಮ, ಶ್ರೀನಿವಾಸ್, ಶಾಲೆಯ ಮುಖ್ಯ ಶಿಕ್ಷಕ ಬಿ.ಶಿವರಾಮ್, ಮಡಿಕೇರಿ ಬಿ.ಆರ್.ಸಿ ಪುಟ್ಟರಂಗನಾಥ್ ಮತ್ತು ಇತರರು ಪಾಲ್ಗೊಂಡಿದ್ದರು.


No comments
Post a Comment