ಅಪ್ರಾಪ್ತ ವಿದ್ಯಾರ್ಥಿನಿಯ ಅಪಹರಣ ಪ್ರಕರಣ: ಯುವಕನ ಬಂಧನ
ಸಿದ್ದಾಪುರ (TOC NEWS@Musthafa Siddapura)ಜ.29: ಸೋಮವಾರ ಬೆಳಿಗ್ಗೆ ಕಾಲೇಜಿಗೆ ತೆರಳಿದ ವಿದ್ಯಾರ್ಥಿನಿ ವಾಪಸ್ ಮನೆಗೆ ಬಾರದ ಕಾರಣ ನೆಲ್ಯಹುದಿಕೇರಿಯ ಯುವಕ ದೀಪಕ್ ಮಗಳನ್ನು ಅಪಹರಿಸಿರುವ ಶಂಕೆಯಲ್ಲಿ ವಿದ್ಯಾರ್ಥಿನಿಯ ತಾಯಿ ಸೋಮವಾರ ರಾತ್ರಿ ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನಲೆ ಯುವಕನ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿತ್ತು. ಪ್ರಕರಣ ದಿನ ಕಳೆದರೂ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ ಹಾಗೂ ಮಗಳ ಪ್ರಾಣಕ್ಕೆ ಅಪಾಯವಿರುವುದರಿಂದ ವಿದ್ಯಾರ್ಥಿನಿಯನ್ನು ಪತ್ತೆ ಹಚ್ಚುವುದರ ಜೊತೆಗೆ ಯುವಕನನ್ನು ಬಂಧಿಸಬೇಕೆಂದು ಒತ್ತಾಯಿಸಿ ಪೊಲೀಸ್ ಠಾಣೆಯ ಮುಂದೆ ವಿದ್ಯಾರ್ಥಿನಿಯ ಪಾಲಕರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಇದರ ನಡುವೆ 17 ವರ್ಷ ಪ್ರಾಯದ ಬಾಲಕಿಯ ಜೊತೆ ದೀಪಕ್ ವಿವಾಹ ಆಗಿರುವ ಫೋಟೋ ಮತ್ತು ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದರಿಂದ ಪ್ರತಿಭಟನಾಕಾರರ ಆಕ್ರೋಶಗೊಂಡರು. ಮಂಗಳವಾರ ರಾತ್ರಿಯೂ ನಡೆದ ಪ್ರತಿಭಟನೆ ಬುಧವಾರ ಬೆಳಿಗ್ಗೆಯೂ ಮುಂದುವರೆಯಿತು. ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ನೇಮಿಸಲಾಯಿತು.
ಬಳಿಕ ಸ್ಥಳಕ್ಕೆ ಆಗಮಿಸಿದ ಸಿ.ಐ ಅನೂಪ್ ಮಾದಪ್ಪ ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ರಾತ್ರಿ 2 ಗಂಟೆಗೆ ಆರೋಪಿ ದೀಪಕ್ ನನ್ನು ಬಂಧಿಸಲಾಗಿತ್ತು. ಅಪ್ರಾಪ್ತ ವಿದ್ಯಾರ್ಥಿನಿಯನ್ನು ನ್ಯಾಯಾಧೀಶರದ ಮುಂದೆ ಹಾಜರುಪಡಿಸಿದ ಬಳಿಕ ಪೋಷಕರಿಗೆ ಒಪ್ಪಿಸಲಾಗುವುದು ಎಂದರು. ಪ್ರಕರಣದಲ್ಲಿ ಶಾಮೀಲಾಗಿರುವವರ ಮೇಲೂ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿನಿಯ ತಾಯಿ ಸಿ.ಐ ಗೆ ದೂರು ನೀಡಿದರು.


No comments
Post a Comment