ಸ್ವಯಂ ಪ್ರೇರಿತ ರಕ್ತದಾನ ಶಿಬಿರ

No comments

        TOC ಮಡಿಕೇರಿ:-ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರೆಡ್ ರಿಬ್ಬನ್, ರೆಡ್ ಕ್ರಾಸ್, ಹಳೆಯ ವಿದ್ಯಾರ್ಥಿ ಸಂಘ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಶುಕ್ರವಾರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
 ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿ ಅಧಿಕಾರಿ ಡಾ.ಕರುಂಬಯ್ಯ ಕೆ.ಪಿ. ಅವರು ಮಾತನಾಡಿ ರಕ್ತದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿದಿರಬೇಕು. ಶಸ್ತ್ರ ಚಿಕಿತ್ಸೆ, ಅಪಘಾತ ಮತ್ತು ಕ್ಯಾನ್ಸ್‍ರ್ ರೋಗಿಗಳಿಗೆ ಹೆಚ್ಚು ರಕ್ತದ ಅವಶ್ಯಕತೆ ಇರುತ್ತದೆ. ಸರಿಯಾದ ಸಮಯಕ್ಕೆ ರಕ್ತ ಸಿಗದಿರುವುದರಿಂದ ರೋಗಿಗಳು ಪ್ರಾಣವನ್ನು ಕಳೆದುಕೊಳುತ್ತಾರೆ. ರಕ್ತವು ಕೇವಲ ರಕ್ತ ನಿಧಿ ಕೇಂದ್ರಗಳಲ್ಲಿ ಮಾತ್ರ ದೊರೆಯುವುದರಿಂದ ವಿದ್ಯಾರ್ಥಿಗಳು ರಕ್ತದಾನದಲ್ಲಿ ಪಾಲ್ಗೊಳ್ಳಬೇಕು. ಸ್ವಯಂ ಪ್ರೇರಿತ ರಕ್ತದಾನದಿಂದ ಸಂಗ್ರಹವಾದ ರಕ್ತವನ್ನು ತುರ್ತು ಸಂದರ್ಭದಲ್ಲಿ ರೋಗಿಗಳಿಗೆ ಉಚಿತವಾಗಿ ನೀಡಲಾಗುತ್ತದೆ. ದಾನಿಗಳಿಂದ ಶೇಖರಿಸಿದ ರಕ್ತವನ್ನು 30 ದಿನದ ಒಳಗೆ ಉಪಯೋಗಿಬಹುದಾಗಿದೆ ಎಂದರು.
ಆರೋಗ್ಯವಂತ ಗಂಡಸರು 3 ತಿಂಗಳಿಗೊಮ್ಮೆ ಮತ್ತು ಹೆಂಗಸರು 4 ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. ಇದರಿಂದ ಯಾವುದೇ ದುಷ್ಪರಿಣಾಮವಿಲ್ಲ. ರಕ್ತದಾನ ಮಾಡುವುದರಿಂದ ಹಲವಾರು ರೋಗಿಗಳನ್ನು ಉಳಿಸಿದ ಸಾರ್ಥಕತೆ ಇರುವುದರ ಜೊತೆಗೆ ರಕ್ತ ದಾನ ಮಾಡಿದ ವ್ಯಕ್ತಿಯ ಆರೋಗ್ಯವು ವೃದ್ಧಿಸುತ್ತದೆ. ರಕ್ತವು ಕೇವಲ ರಕ್ತ ನಿಧಿ ಕೇಂದ್ರಗಳಲ್ಲಿ ಮಾತ್ರ ದೊರೆಯುವುದರಿಂದ ವಿದ್ಯಾರ್ಥಿಗಳು ವರ್ಷಕೊಮ್ಮೆ ರಕ್ತದಾನ ಮಾಡುವುದಾಗಿ ಸಂಕಲ್ಪ ಮಾಡಬೇಕು ಎಂದು ಅವರು ಹೇಳಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ.ಕೆ.ಸಿ.ದಯಾನಂದ ಅವರು ಮಾತನಾಡಿ ರಕ್ತದಾನದಿಂದ ಕ್ಯಾನ್ಸರ್, ರಕ್ತಸ್ರಾವದ ಕಾಯಿಲೆಗಳು, ಕ್ಯಾನ್ಸರ್‍ಗೆ ಸಂಬಂಧಿಸಿದ ದೀರ್ಘಕಾಲದ ರಕ್ತಹೀನತೆ ಮತ್ತು ಇತರ ಅನುವಂಶಿಕ ರಕ್ತದ ವೈಪರೀತ್ಯಗಳಿಗೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತದೆ. ಮಾನವ ರಕ್ತವನ್ನು ಉತ್ಪಾದಿಸಲು ಸಾಧ್ಯವಿಲ್ಲ, ಜನರು ಮಾತ್ರ ಇದರ ಮೂಲವಾಗಿದೆ ಮತ್ತು ಅದಕ್ಕಾಗಿಯೇ ರಕ್ತದಾನ ಮಾಡುವುದು ಮತ್ತು ಅಗತ್ಯವಿರುವವರಿಗೆ ಸಹಾಯ ಮಾಡುವುದು ಮುಖ್ಯ ಎಂದು ಅವರು ಹೇಳಿದರು.
ಇತಿಹಾಸ ಪ್ರಾಧ್ಯಾಪಕರಾದ ಶಶಿಧರ್ ಅವರು ಮಾತನಾಡಿ ರಕ್ತವು ನಮ್ಮ ದೇಹದ ಅತ್ಯಂತ ಅಗತ್ಯವಾದ ದ್ರವಗಳಲ್ಲಿ ಒಂದಾಗಿದೆ. ಅದು ನಮ್ಮ ದೇಹದ ಸುಗಮ ಕಾರ್ಯನಿರ್ವಹಣೆಗೆ ಸಹಾಯ ಮಾಡುತ್ತದೆ. ದೇಹವು ಅಧಿಕ ಪ್ರಮಾಣದಲ್ಲಿ ರಕ್ತವನ್ನು ಕಳೆದುಕೊಂಡರೆ, ಜನರು ಮಾರಕ ಕಾಯಿಲೆಗಳಿಗೆ ಒಳಗಾಗುತ್ತಾರೆ ಮತ್ತು ಸಾಯುತ್ತಾರೆ. ರಕ್ತವು ಜಾತಿ, ಮತ, ಧರ್ಮವನ್ನು ಲೆಕ್ಕಿಸದೆ ಜನರನ್ನು ಒಂದುಗೂಡಿಸುವ ಮಾನವೀಯತೆಯ ಸಂಕೇತ ಎಂದು ಅವರು ಹೇಳಿದರು.
ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿ ಸಿಬ್ಬಂಧಿಗಳು ಮತ್ತು ವಿದ್ಯಾರ್ಥಿಗಳು ಮತ್ತು ಇತರರು ಪಾಲ್ಗೊಂಡಿದ್ದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ.ಕೆ.ಸಿ.ದಯಾನಂದ ಸ್ವಾಗತಿಸಿ, ವಂದಿಸಿದರು. ವಿದ್ಯಾರ್ಥಿ ದೀಕ್ಷಿತ್ ಗೌಡ ಎಚ್.ಎ ನಿರೂಪಿಸಿದರು, ವಿದ್ಯಾರ್ಥಿ ಶಿವ ಪ್ರಾರ್ಥಿಸಿದರು.

No comments

Post a Comment