TOC ಮಡಿಕೇರಿ:-ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತ ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೊಡಗು ಜಿಲ್ಲಾ ವಕ್ಷ ಸಲಹಾ ಸಮಿತಿ, ಇವರ ಸಂಯುಕ್ತ ಆಶ್ರಯದಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನಾ ತರಬೇತಿ ಶಿಬಿರವು ಗುರುವಾರ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಿತು.
ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಆನಂದ್ ಅವರು ಮಾತನಾಡಿ ಆರೋಗ್ಯಕ್ಕೆ ಸಂಭಂದಿಸಿದ ಸರ್ಕಾರದ ಯೋಜನೆಗಳಾದ ಆಯುಷ್ಮಾನ್ ಭಾರತ್ ಮತ್ತು ಆರೋಗ್ಯ ಕರ್ನಾಟಕದ ಬಗ್ಗೆ ಸಂವಹನದ ಮೂಲಕ ವಿಚಾರ ವಿನಿಮಯ ಮಾಡಿಕೊಳ್ಳಬೇಕು. ಈ ಯೋಜನೆ ಬಗ್ಗೆ ದೇಶದ ಕೊನೆಯ ವ್ಯಕ್ತಿಗೂ ತಲುಪುವಂತಾಗಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ಕೊಡಗು ಜಿಲ್ಲಾ ಸಲಹಾ ಸಮಿತಿ ಸದಸ್ಯರಾದ ಹಾಗೂ ಕಾರ್ಯಕ್ರಮದ ಅಧ್ಯಕ್ಷರಾದ ಸಿ.ಎಂ.ಹಮೀದ್ ಮೌಲ್ವಿ ಅವರು ಮಾತನಾಡಿ ಪ್ರಪಂಚದಲ್ಲಿ ಮನುಷ್ಯನಿಗಿರುವ ಸಂಪತೆಂದರೆ ಆರೋಗ್ಯ ಆದ್ದರಿಂದ ಇಲ್ಲರೂ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಗುರುತಿನ ಚೀಟಿ ಪಡೆದುಕೊಳ್ಳುವಂತಾಗಬೇಕು ಎಂದರು.
ಜಿಲ್ಲಾ ಆಯುಷ್ಮಾನ್ ಭಾರತ್ ಕಾರ್ಯಕ್ರಮದ ಜಿಲ್ಲಾ ಸಂಯೋಜಕರಾದ ತೇಜಸ್ ಅವರು ಮಾತನಾಡಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಬಿಪಿಎಲ್ ಕುಟುಂಬಗಳಿಗೆ ಶೇ.100 ರಷ್ಟು ಆರೋಗ್ಯ ಸಂಬಂಧಿಸಿದ ವೆಚ್ಚ ಭರಿಸಲಿದೆ. ಬಿಪಿಎಲ್ ಪಡಿತರ ಕಾರ್ಡ್ ಹೊಂದಿರುವವರು ಹಾಗೂ ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆಯಡಿ ನೋಂದಾಯಿಸಿರುವವರು ಒಂದು ವರ್ಷಕ್ಕೆ 5 ಲಕ್ಷ ರೂ. ವರೆಗೆ ಉಚಿತ ಚಿಕಿತ್ಸ ಸೌಲಭ್ಯ ದೊರೆಯಲಿದೆ. ಎಪಿಎಲ್ ಕಾರ್ಡ್‍ದಾರರಿಗೆ ಸರ್ಕಾರಿ ಪ್ಯಾಕೇಜ್ ದರದ ಶೇ.30 ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು, ವಾರ್ಷಿಕ ಮಿತಿ ಕುಟುಂಬಕ್ಕೆ 1.5 ಲಕ್ಷ ರೂ. ಚಿಕಿತ್ಸೆ ದೊರೆಯಲಿದೆ ಎಂದು ಅವರು ಮಾಹಿತಿ ನೀಡಿದರು.
ಹೃದಯ ರೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡ ಕಾಯಿಲೆ, ನವಜಾತ ಶಿಶುಗಳ ಕಾಯಿಲೆ ಮತ್ತಿತರ 900 ಚಿಕಿತ್ಸಾ ವಿಧಾನಗಳು ಹಾಗೂ 169 ತುರ್ತು ಚಿಕಿತ್ಸೆಗಳು ಮತ್ತು 36 ಉಪ ಚಿಕಿತ್ಸಾ ವಿಧಾನಗಳು ಸೇರಿ ಒಟ್ಟು 1600 ಚಿಕಿತ್ಸೆಗಳು ಲಭ್ಯವಾಗಲಿದೆ. ಹಾಗೆಯೇ 169 ತುರ್ತು ಚಿಕಿತ್ಸೆಗಳಿಗೆ ನೇರವಾಗಿ ನೋಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದಾಗಿದೆ ಎಂದರು.
ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯ ಅಡಿಯಲ್ಲಿ ಎಬಿಎಆರ್‍ಕೆ ಕಾರ್ಡ್‍ನ್ನು ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ನೀಡಲಾಗುತ್ತದೆ. ಆಧಾರ್ ಕಾರ್ಡ್ ಮತ್ತು ಪಡಿತರ ಕಾರ್ಡ್‍ಗಳನ್ನು ಹಾಜರುಪಡಿಸಿ ಆರೋಗ್ಯ ಕಾರ್ಡ್ ಪಡೆಯಬಹುದು ಎಂದು ಅವರು ತಿಳಿಸಿದರು.
ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ ಸಂಖ್ಯೆ : 1800 425 8330 ಗೆ ಕರೆ ಮಾಡಿ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆ ಬಗ್ಗೆ ತಿಳಿದುಕೊಳ್ಳಬಹುದು ಹಾಗೂ ಸಂಬಂಧಿಸಿದ ಆಸ್ಪತ್ರೆಯ ಆರೋಗ್ಯ ಮಿತ್ರರ ಮೊಬೈಲ್ ಸಂಖ್ಯೆ ಪಡೆದುಕೊಂಡು ಸಂಪರ್ಕಿಸಬಹುದು. ವೆಬ್‍ಸೈಟ್ :ತಿತಿತಿ.sಚಿsಣ.gov.iಟಿ/home, ತಿತಿತಿ.ಚಿಡಿogಥಿಚಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ನೋಡಬಹುದು. ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಕಟಿಸಿರುವ ಸಮೀಪದ ನೊಂದಾಯಿತ ಆಸ್ಪತ್ರೆಗಳ ಪಟ್ಟಿ ನೋಡಬಹುದು.
ಹತ್ತಿರದ ಸರ್ಕಾರಿ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆಗಳು, ಜಿಲ್ಲಾ ಆಸ್ಪತ್ರೆಗಳು, ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು, ಆಸ್ಪತ್ರೆಗಳಲ್ಲಿನ ಆರೋಗ್ಯ ಮಿತ್ರರು, ಆರೋಗ್ಯ ಸಹಾಯವಾಣಿ 104, ಟೋಲ್ ಫ್ರೀ ಸಂಖ್ಯೆ 1800 425 8330 ನ್ನು ಸಂಪರ್ಕಿಸಬಹುದು.
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಗುರಿತಿನ ಚೀಟಿ ಪಡೆದುಕೊಳ್ಳುವುದರ ಬಗ್ಗೆ ಕಾರ್ಯಗಾರ ಏರ್ಪಡಿಸುವುದರ ಜೊತೆಗೆ ಅಸಾಂಕ್ರಾಮಿಕ ರೋಗಗಳಾದ ಮಧುಮೇಹ, ರಕ್ತದೊತ್ತಡ, ಹೃದಯ ತಪಾಸಣೆ ಮತ್ತಿತರ ಬಗ್ಗೆ ಆರೋಗ್ಯ ತಪಾಸಣೆ ಕಾರ್ಯಕ್ರಮವು ಇದೇ ಸಂದರ್ಭದಲ್ಲಿ ಜರುಗಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರಮೇಶ್, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ದೇವರಾಜು, ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರದ ಹಿರಿಯ ಚಿಕಿತ್ಸ ಮೆಲ್ವೀಚಾರಕರಾದ ಎಂ.ಮಹದೇವಪ್ಪ, ಕೊಡಗು ಜಿಲ್ಲಾ ಸಲಹಾ ಸಮಿತಿ ಸದಸ್ಯರಾದ ಮೊಹಮ್ಮದ್ ಹಾಜಿ ಕುಂಜಿಲ, ಮೊಹಮ್ಮದ್ ಹಾಜಿ ಯಡಪಾಲ, ಉಮ್ಮರ್ ಫೈಜಿ, ಮಸೀದಿಯ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಇತರರು ಪಾಲ್ಗೊಂಡಿದ್ದರು.


No comments
Post a Comment