TOC ಮಡಿಕೇರಿ :-ಕನ್ನಡ ಸಾಹಿತ್ಯ ಸಮ್ಮೇಳನದಿಂದ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕøತಿ ಬೆಳವಣೆಗೆಗೆ ಅನುಕೂಲವಾಗಿದ್ದು, ವಿದ್ಯಾರ್ಥಿಗಳು ಸಾಹಿತ್ಯ ಸಮ್ಮೇಳನದ ಪ್ರಯೋಜನ ಪಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ ಅವರು ಸಲಹೆ ಮಾಡಿದ್ದಾರೆ.
ಕೊಡಗು ಜಿಲ್ಲಾ 14 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನೀಲಗಿರಿ ತಳವಾರ್ ಅವರು ಮಾತನಾಡಿ ಇಂದು ಪುಸ್ತಕ, ದಿನಪತ್ರಿಕೆ ಓದುವ ಸಂಸ್ಕøತಿ ಕಡಿಮೆಯಾಗುತ್ತಿದೆ. ಮೊಬೈಲ್, ಇಂಟರ್‍ನೆಟ್‍ನಲ್ಲಿ ಓದಿಕೊಳ್ಳುವುದು ಹೆಚ್ಚಾಗುತ್ತಿದೆ. ಇದರಿಂದ ಸಾಹಿತ್ಯ ಬೆಳವಣಿಗೆ ಎಷ್ಟರ ಮಟ್ಟಿಗೆ ಸಾಧ್ಯ ಎಂಬುದರ ಬಗ್ಗೆ ಅವಲೋಕನ ಮಾಡಬೇಕಿದೆ ಎಂದು ಅವರು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷರಾದ ಲೋಕೇಶ್ ಸಾಗರ್ ಅವರು ಮಾತನಾಡಿ ಕಳೆದ ನಾಲ್ಕು ವರ್ಷದಲ್ಲಿ ತಾಲ್ಲೂಕು, ಜಿಲ್ಲಾ ಮಟ್ಟದ ಮಕ್ಕಳು, ಮಹಿಳೆಯರು ಸೇರಿದಂತೆ ಒಟ್ಟು 17 ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು.
ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ನಿಡ್ತ ಶಾಲೆಯ ವಿದ್ಯಾರ್ಥಿನಿ ಇಡೀ ಜಿಲ್ಲೆಗೆ ಹೆಚ್ಚು ಅಂಕ ಪಡೆದ ಪರಿಣಾಮ ನಿಡ್ತ ಗ್ರಾಮದಲ್ಲಿ ಕನ್ನಡ ಸಾಹಿತ್ಯ ಸಮ್ಮೆಳನವನ್ನು ಆಯೋಜಿಸಲಾಗಿದೆ ಎಂದು ಅವರು ನುಡಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷರಾದ ಟಿ.ಪಿ.ರಮೇಶ ಅವರು ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಸಾಹಿತ್ಯ ಸಮ್ಮೇಳನ ಆಯೋಜಿಸುವುದರಿಂದ ಸಾಹಿತ್ಯ, ಸಂಸ್ಕøತಿಯನ್ನು ಪಸರಿಸಿದಂತಾಗುತ್ತದೆ ಎಂದು ಅವರು ನುಡಿದರು.
ಕೊಡಗು ಜಿಲ್ಲೆಯಲ್ಲಿ ಅಖಿಲ ಭಾರತ ಮಟ್ಟದ 3 ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿದ್ದು, ಡಿ.ವಿ.ಗಂಡಪ್ಪ, ಸಾಂಬಾ ಜೋಶಿ, ನಾ.ಡಿಸೋಜ ಅವರು ಸಮ್ಮೇಳನದ ಅಧ್ಯಕ್ಷರಾಗಿದ್ದರು, ಸದ್ಯ ಈಗ 50 ವರ್ಷ ಪೂರ್ಣಗೊಂಡ ಹಿನ್ನೆಲೆ ಸವಿನೆನಪಿಗಾಗಿ ಒಂದು ವಿಶೇಷ ಸಾಹಿತ್ಯ ಸಮ್ಮೇಳನ ಆಯೋಜಿಸಿ ದಾಖಲಿಕರಣ ಮಾಡಬೇಕು ಎಂದು ಅವರು ಸಲಹೆ ಮಾಡಿದರು.
ಜಿ.ಪಂ.ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್ ಅವರು ಮಾತನಾಡಿ ಕನ್ನಡ ಭಾಷೆಯನ್ನು ಪ್ರೀತಿಸುವುದರ ಜೊತೆಗೆ ಮಾತನಾಡಬೇಕು. ಮಕ್ಕಳಿಗೆ ಕನ್ನಡ ಭಾಷೆಯ ಬಗ್ಗೆ ತಿಳಿಸಬೇಕು. ಜನಪದ ಕಲೆ ಉಳಿಸಿ ಬೆಳೆಸಬೇಕು ಎಂದು ಅವರು ಹೇಳಿದರು.
ಜಿ.ಪಂ.ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸರೋಜಮ್ಮ ಅವರು ಮಾತನಾಡಿ ನಿಡ್ತ ಗ್ರಾಮದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಿ ಕನ್ನಡವನ್ನು ಪಸರಿಸುವಲ್ಲಿ ಸಹಕಾರಿಯಾಗಿದೆ.
ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ ಅವರು ಮಾತನಾಡಿ ಕನ್ನಡ ಭಾಷೆಯಲ್ಲಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದಿದ್ದಾರೆ. ಸದಾಭಿರುಚಿ ಸಾಹಿತ್ಯದಿಂದಾಗಿ ಹೆಚ್ಚಿನ ಪಶಸ್ತಿ ಪಡೆಯಲು ಸಾಧ್ಯವಾಗಿದೆ ಎಂದು ಅವರು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ತಿನ 13ನೇ ನಿಕಟ ಪೂರ್ವ ಅಧ್ಯಕ್ಷರಾದ ಭಾರದ್ವಾಜ್ ಅವರು ಮಾತನಾಡಿದರು. ಪತ್ರಕರ್ತರಾದ ಬಿ.ಜಿ.ಅನಂತಶಯನ ಅವರು ಬರೆದಿರುವ ನುಡಿ ದೀಪ್ತಿ, ಜಲಕಾಳಪ್ಪ ಅವರು ಬರೆದಿರುವ ಮುದ್ರೆ, ಡಾ.ಬೆಸೂರು ಮೋಹನ್ ಪಾಳೆಗಾರ್ ಅವರು ಬರೆದಿರುವ ಜನಪದ ಕತೆಗಳು, ಅನನ್ಯತೆ, ಶರ್ಮಿಳಾ ರಮೇಶ್ ಅವರು ಬರೆದಿರುವ ದಿಟ್ಟೆ ಹಾಗೂ ಶಿಕ್ಷಕಿ ಇಂದಿರಾ ಅವರು ಬರೆದಿರುವ ಹೊಂಬೆಳಕು ಪುಸ್ತಕಗಳನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.
ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ ಅವರು ಸಾನಿದ್ಯ ವಹಿಸಿದ್ದರು. ನಿಡ್ತ ಗ್ರಾ.ಪಂ. ಅಧ್ಯಕ್ಷರಾದ ಮುಸ್ತಪ, ಜಿ.ಪಂ. ಮಾಜಿ ಸದಸ್ಯರಾದ ಡಿ.ಬಿ.ಧರ್ಮಪ್ಪ, ನಿಡ್ತ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರಾದ ಎಚ್.ಪಿ.ಶೇಷಾದ್ರಿ, ಶನಿವಾರಸಂತೆ ಲಯನ್ಸ್ ಕ್ಲಬ್ ಅಧ್ಯಕ್ಷರಾದ ನಾಗಪ್ಪ, ರೋಟರಿ ಕ್ಲಬ್ ಅಧ್ಯಕ್ಷರಾದ ಶಿಬು ಸಂಪಿಗೆ ಗಾಳ, ಕ.ಸಾಪ. ತಾಲ್ಲೂಕು ಘಟಕದ ಅಧ್ಯಕ್ಷರಾದ ಎಸ್.ಪಿ.ವಿಜೇತ್, ಕುಡೆಕಲ್ ಸಂತೋಷ್, ಎಂ.ಡಿ.ರಂಗಸ್ವಾಮಿ, ಮಧೂಸ್ ಪೂವಯ್ಯ, ಡಾ.ಚಂದ್ರಶೇಖರ್ ಇತರರು ಇದ್ದರು. ಶಿಕ್ಷಕರಾದ ಜಯಕುಮಾರ್ ಮತ್ತು ದಿನೇಶ್ ಸ್ವಾಗತಿಸಿ, ನಿರೂಪಿಸಿ ನಿರ್ವಹಿಸಿದರು.

No comments
Post a Comment