ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ

No comments


      TOC ಮಡಿಕೇರಿ :-ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಉಪ ಕೃಷಿ ನಿರ್ದೇಶಕರ ಕಚೇರಿ ಕಟ್ಟಡ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಶನಿವಾರ ಶಂಕುಸ್ಥಾಪನೆ ನೆರವೇರಿಸಿದರು.
ಸಮಾರಂಭದಲ್ಲಿ ಶಾಸಕರಾದ ಎಂ.ಪಿ ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನೀಲ್ ಸುಬ್ರಮಣಿ, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ನೆಲ್ಲಚಂಡ ಕಿರಣ್ ಕಾರ್ಯಪ್ಪ,  ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್,  ಜಿ.ಪಂ ಸಿಇಒ ಕೆ.ಲಕ್ಷ್ಮೀಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪಿ.ಎಸ್.ಮಚ್ಚಾಡೋ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್.ಗಾಯತ್ರಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರಾಜು, ಇತರರು ಪಾಲ್ಗೊಂಡಿದ್ದರು.

No comments

Post a Comment