ಮಡಿಕೇರಿ ಜ.30(TOC NEWS):-ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ವತಿಯಿಂದ ಹುತಾತ್ಮರ ದಿನಾಚರಣೆಯನ್ನು ನಗರದಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ನಗರದ ಜಿಲ್ಲಾಡಳಿತ ಭವನದಲ್ಲಿನ ಜಿಲ್ಲಾ ಖಜಾನೆಯಲ್ಲಿರಿಸಲಾದ ಮಹಾತ್ಮ ಗಾಂಧೀಜಿಯವರ ಚಿತಾಭಸ್ಮವನ್ನು ಹೊರತೆಗೆದು ಪುಷ್ಪಮಾಲೆಗಳಿಂದ ಶೃಂಗರಿಸಿ ಗೌರವ ಸಮರ್ಪಣೆ ಮಾಡಲಾಯಿತು.
ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ಸದಸ್ಯರ ನೇತೃತ್ವದಲ್ಲಿ ಪೊಲೀಸ್ ಬ್ಯಾಂಡ್, ಸ್ಕೌಟ್ ಮತ್ತು ಗೈಡ್ಸ್, ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಯಲ್ಲಿ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದ ಮುಖ್ಯರಸ್ತೆ ಮೂಲಕ ಗಾಂಧೀಜಿಯವರ ಚಿತಾಭಸ್ಮವನ್ನು ಕೊಂಡೊಯ್ದು ಗಾಂಧಿ ಮಂಟಪದಲ್ಲಿರಿಸಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಮರ್ಪಿಸಲಾಯಿತು.
ಇದೇ ವೇಳೆ ಪೊಲೀಸ್ ಇಲಾಖೆಯಿಂದ ಮೂರು ಸುತ್ತುಗಳ ಕುಶಾಲತೋಪು ಹಾರಿಸುವ ಮೂಲಕ ರಾಷ್ಟ್ರಪಿತರಿಗೆ ಪೊಲೀಸ್ ಗೌರವಾರ್ಪಣೆ ಸಲ್ಲಿಸಲಾಯಿತು. ಸರ್ವೋದಯ ಸಮಿತಿಯ ಸದಸ್ಯರಾದ ಲಿಯಾಕತ್ ಅಲಿ ಅವರು ಗಾಂಧೀಜಿಯವರ ಮೆಚ್ಚಿನ ಗೀತೆಯಾದ ವೈಷ್ಣವ ಜನತೋ ಗೀತೆಯನ್ನು ಹಾಡಿದರು.
ಗಾಂಧಿ ಮಂಟಪದಲ್ಲಿ ಸರ್ವಧರ್ಮ ಪ್ರಾರ್ಥನೆ, ಗಾಂಧೀಜಿಯವರ ಮೆಚ್ಚಿನ ಭಜನಾ ಗಾಯನ ಕಾರ್ಯಕ್ರಮವನ್ನು ಸ್ಕೌಟ್ಸ್ ಮತ್ತು ಗೈಡ್ಸ್ ತಂಡದ ವಿದ್ಯಾರ್ಥಿಗಳು ನಡೆಸಿಕೊಟ್ಟರು, ಸರ್ವಧರ್ಮ ಗುರುಗಳಿಂದ ಭಗವದ್ಗೀತೆ, ಬೈಬಲ್, ಕುರಾನ್ ಸಂದೇಶಗಳ ಪಠಣ ಮಾಡಲಾಯಿತು.
ಮಾಜಿ ಸಚಿವರಾದ ಎಂ.ಸಿ.ನಾಣಯ್ಯ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಅರುಣ್ ಮಾಚಯ್ಯ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಸರ್ವೋದಯ ಸಮಿತಿಯ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ನಿಕಟಪೂರ್ವ ಅಧ್ಯಕ್ಷರಾದ ಟಿ.ಪಿ.ರಮೇಶ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪಿ.ಎಸ್.ಮಚ್ಚಾಡೋ, ಜಿಲ್ಲಾ ಖಜಾನಾಧಿಕಾರಿ ಪಿ.ಪದ್ಮಜಾ, ಡಿವೈಎಸ್ಪಿ ಬಿ.ಪಿ.ದಿನೇಶ್ ಕುಮಾರ್, ಪೌರಾಯುಕ್ತರಾದ ಎಂ.ಎಲ್.ರಮೇಶ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್.ಗಾಯತ್ರಿ, ತಾಲೂಕು ತಹಶೀಲ್ದಾರ್ ಮಹೇಶ್, ಮಡಿಕೇರಿ ವೃತ್ತ ನಿರೀಕ್ಷಕರಾದ ಅನೂಪ್ ಮಾದಪ್ಪ, ಸ್ಕೌಟ್ಸ್ ಮತ್ತು ಗೈಡ್ಸ್‍ನ ಆಯುಕ್ತರಾದ ಜಿಮ್ಮಿ ಸಿಕ್ವೇರಾ, ಗಾಂಧಿ ಸ್ಮಾರಕ ಸಮಿತಿ ಸದಸ್ಯರಾದ ಕೆ.ಟಿ.ಬೇಬಿಮ್ಯಾಥ್ಯೂ, ಸರ್ವೋದಯ ಸಮಿತಿಯ ಉಪಾಧ್ಯಕ್ಷರಾದ ಸ್ವರ್ಣಲತಾ, ಪ್ರಧಾನ ಕಾರ್ಯದರ್ಶಿಗಳಾದ ಮುನೀರ್ ಅಹ್ಮದ್, ಸರ್ವೋದಯ ಸಮಿತಿಯ ಖಜಾಂಜಿ ಕೋಡಿ ಚಂದ್ರಶೇಖರ್, ಹಿರಿಯ ಸದಸ್ಯರಾದ ವಾಸುದೇವ್, ಸುಬ್ರಮಣಿ, ಚುಮ್ಮಿ ದೇವಯ್ಯ, ಅಂಬೆಕಲ್ಲು ನವೀನ್, ಸುರಯ್ಯ ಅಬ್ರಾರ್, ಮಿನಾಜ್, ಎಚ್.ಬಿ.ಯಶೋಧ, ಪ್ರೇಮಾ ಕೃಷ್ಣಪ್ಪ, ಗೀತಾ ಲಿಂಗಪ್ಪ, ಕಾಣೆಹಿತ್ಲು ಮೊಣ್ಣಪ್ಪ, ಪೂರ್ಣಯ್ಯ, ರೇವತಿ ರಮೇಶ್, ವಿಲ್‍ಫ್ರೆಡ್ ಕ್ರಾಸ್ತ, ಆರ್.ಪಿ.ಚಂದ್ರಶೇಖರ್, ಶೇಕ್ ಮಹಮ್ಮದ್, ಸೇವಾದಳದ ರೇವತಿ, ಸ್ಕೌಟ್ ಅಂಡ್ ಗೈಡ್‍ನ ದಮಯಂತಿ, ಸ್ಕೌಟ್ ಮಾಸ್ಟರ್ ರಂಜಿತ್ ಕೆ.ಯು, ನಗರ ಸಭೆಯ ಹಿರಿಯ ಆರೋಗ್ಯ ನಿರೀಕ್ಷಕರಾದ ಪಿ.ಕೆ.ನಾಚಪ್ಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮಣಜೂರು ಮಂಜುನಾಥ್, ಸೇರಿದಂತೆ ಇತರ ಸಂಘ ಸಂಸ್ಥೆಯ ಸದಸ್ಯರು ಮತ್ತು ಗಣ್ಯರು ಗೌರವ ನಮನ ಸಲ್ಲಿಸಿದರು.
ಹುತಾತ್ಮರ ದಿನಾಚರಣೆಯ ಕಾರ್ಯಕ್ರಮವನ್ನು ಸರ್ವೋದಯ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ನಿರ್ವಹಿಸಿದರು.
No comments
Post a Comment