ಮಡಿಕೇರಿ TOC:-ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಇವರ ವತಿಯಿಂದ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆಬ್ರವರಿ, 07 ರಂದು ಯುವ ಕೌಶಲ್ಯ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ 18 ರಿಂದ 35 ವಯೋಮಾನದೊಳಗಿನ ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಹಾಗೂ ಸ್ನಾತ್ತಕೋತ್ತರ ಪದವೀಧರರಿಗೆ ಮೃದು ಕೌಶಲ್ಯ ತರಬೇತಿ ನೀಡಿ ಉದ್ಯೋಗಾರ್ಹತೆಯ ಮಟ್ಟವನ್ನು ಹೆಚ್ಚಿಸಿ, ಅವರೊಡನೆ ಸಮಾಲೋಚನೆಯನ್ನು ನಡೆಸಿ ಅವರಲ್ಲಿರುವ ಕೊರತೆಗಳನ್ನು ಅರಿತು, ಸೂಕ್ತ ತರಬೇತಿ ನೀಡಿ ಮೌಲ್ಯಮಾಪನ ಮಾಡಲಾಗುತ್ತದೆ. ಭಾಗವಹಿಸುವ ಆಸಕ್ತ ಯುವಕ, ಯುವತಿಯರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವವರು ತಿತಿತಿ.ಞಚಿushಚಿಟಞಚಿಡಿ.ಛಿom ನಲ್ಲಿ ಹೆಸರು ನೋಂದಣಿ ಮಾಡುವಂತೆ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.
No comments
Post a Comment