ಮಡಿಕೇರಿ TOC:-ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಮಾರ್ಚ್, 21 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಸಚಿವರು ಮಾರ್ಚ್, 21 ರಂದು ಮಧ್ಯಾಹ್ನ 3.30 ಗಂಟೆಗೆ ನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿ ಮಾರಕ ಕಾಯಿಲೆ ಕೊರೊನಾ(ಕೋವಿಡ್-19) ಶಂಕಿತರ ಪರೀಕ್ಷೆ/ ಚಿಕಿತ್ಸೆಗೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ಪರಿಶೀಲನೆ ಹಾಗೂ ಸಂಸ್ಥೆಯ ನಿರ್ದೇಶಕರೊಂದಿಗೆ ಚರ್ಚೆ ನಡೆಸಲಿದ್ದಾರೆ.
ನಂತರ ಸಂಜೆ 4 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾರಕ ಕಾಯಿಲೆ ಕೊರೊನಾ(ಕೋವಿಡ್-19) ಬಗ್ಗೆ ಜಿಲ್ಲೆಯಲ್ಲಿ ಕೈಗೊಂಡ ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು ಸೇರಿದಂತೆ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯ ಕುರಿತಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎಸ್.ಬಿ.ನರೇಂದ್ರ ಅವರು ತಿಳಿಸಿದ್ದಾರೆ.
No comments
Post a Comment