ಸೋಮವಾರಪೇಟೆ (Times Of Coorg) : ಪ್ರಧಾನ ಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ರೂ. 1ಲಕ್ಷ ದೇಣಿಗೆ ನೀಡಿದ್ದಾರೆ. ದೇಶಾದ್ಯಂತ ಸಾರ್ವಜನಿಕರು ಪ್ರಧಾನಮಂತ್ರಿಗಳ ಮನವಿಗೆ ಸ್ಪಂದಿಸುತ್ತಿದ್ದು, ಸಾರ್ವಜನಿಕರು ಸ್ವಯಂಪ್ರೇರಣೆಯಿಂದ ಕೋವಿಡ್ ಪರಿಹಾರ ನಿಧಿಗೆ ಸಹಾಯ ನೀಡುತ್ತಿದ್ದಾರೆ. ಭಾರತೀಯ ಜನತಾ ಪಾರ್ಟಿಯಿಂದ ಪ್ರತಿ ಬೂತ್ ಮಟ್ಟದಿಂದಲೇ ಪರಿಹಾರ ನಿಧಿಗೆ ಹಣ ಕೊಡುವ ಯೋಜನೆ ತಯಾರಿಸಲಾಗಿದ್ದು, ಪ್ರತಿ ಬೂತ್‍ನಿಂದ ಕನಿಷ್ಟ 100 ಮಂದಿ, ತಮ್ಮ ಕೈಲಾದಷ್ಟು ದೇಣಿಗೆ ನೀಡುವಂತೆ ಮನವಿ ಮಾಡಲಾಗಿದೆ ಎಂದು ರಂಜನ್ ತಿಳಿಸಿದ್ದಾರೆ.
ಕೋವಿಡ್ ಸೋಂಕು ಹರಡ ದಂತೆ ತಡೆಯಲು ದೇಶದ ಪ್ರಧಾನಿಯಿಂದ ಮೊದಲ್ಗೊಂಡು ಸ್ಥಳೀಯವಾಗಿ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ಜನಪ್ರತಿನಿಧಿಗಳು ಶ್ರಮಿಸುತ್ತಿದ್ದು, ಸಾರ್ವಜನಿಕರು ಸರ್ಕಾರ ನೀಡುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಂಡು ಕೋವಿಡ್ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕು ಎಂದು ಶಾಸಕ ರಂಜನ್ ಮನವಿ ಮಾಡಿದ್ದಾರೆ.
No comments
Post a Comment