ಬೆಂಗಳೂರು (Times Of Coorg) : ದೇಶಾದ್ಯಂತ ಮಾರಕ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸುರಕ್ಷತಾ ಕ್ರಮವಾಗಿ ಮುಂದಿನ 15 ದಿನಗಳ ಕಾಲ ಲಾಕ್ ಡೌನ್ ಮುಂದುವರೆಸಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು .
ಪ್ರಧಾನಿ ನರೇಂದ್ರ ಮೋದಿಯವರ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ನಂತರ ಮುಖ್ಯಮಂತ್ರಿ ಸುದ್ದಿಗೋಷ್ಠಿ ನಡೆಸಿ " ಪ್ರಧಾನಿಯವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸಿ ಪ್ರತಿ ರಾಜ್ಯದ ಸ್ಥಿತಿಗತಿಗಳನ್ನು ತಿಳಿದುಕೊಂಡರು ಹಾಗೂ ಹೆಚ್ಚುತ್ತಿರುವ ಪ್ರಕರಣಗಳ ಬಗ್ಗೆ ಆತಂಕ ವ್ಯಕ್ತಪಡಿಸಿದರು. ಯಾವುದೇ ಕಾರಣಕ್ಕೂ ಲಾಕ್ ಡೌನ್ ಸಡಿಲಗೊಳಿಸಬಾರದು. ಇನ್ನೂ ೧೫ ದಿನಗಳ ಕಾಲ ಲಾಕ್ ಡೌನ್ ಮುಂದುವರೆಸಬೇಕೆಂದು" ಹೇಳಿದ್ದಾಗಿ ತಿಳಿಸಿದರು.
ಕೃಷಿ , ಕೈಗಾರಿಕೆಗೆ ಅನುಕೂಲವಾಗುವಂತೆ ಕೆಲವು ನಿಯಮಗಳನ್ನು ತಿಳಿಸಲಾಗುವುದು, ಮೀನುಗಾರಿಕೆಗೆ ಹಾಗೂ ಕೃಷಿಕರಿಗೆ ಲಾಕಾ ಡೌನ್ ನಿಂದು ವಿನಾಯಿತಿ ಇದೆ ಹಾಗೂ ಸರ್ಕಾರಿ ಕಚೇರಿಗಳ ಕಾರ್ಯಚಟುವಟಿಕೆಗಳಿಗೂ ಅವಕಾಶ ನೀಡಲಾಗುವುದು ಎಂದು ತಿಳಿಸಿದರು. ಇನ್ನೂ ಎರಡು ದಿನಗಳಲ್ಲಿ ಕೇಂದ್ರ ಸರ್ಕಾರ ಲಾಕ್ ಡೌನ್ ಮಾರ್ಗಸೂಚಿ ಬಿಡುಗಡೆಗೊಳಿಸಲಿದೆ ಎಂದು ತಿಳಿಸಿದರು.
No comments
Post a Comment