ಕೋವಿಡ್ 19 ಮತ್ತಷ್ಟು ಎಚ್ಚರಿಕೆ ವಹಿಸಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್

No comments
 ಮಡಿಕೇರಿ (Times Of Coorg):-ಕೋವಿಡ್-19 ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಕಳೆದ 28 ದಿನಗಳಿಂದ ಯಾವುದೇ ರೀತಿಯ ಪಾಸಿಟಿವ್ ಪ್ರಕರಣಗಳು ಕಂಡುಬಂದಿಲ್ಲ. ಇದೇ ರೀತಿ ಮುಂದಿನ ದಿನಗಳಲ್ಲಿಯೂ ಕಾಪಾಡಿಕೊಂಡು ಹೋಗಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ಅವರು ಸಲಹೆ ಮಾಡಿದ್ದಾರೆ.  
 
     ಜಿಲ್ಲೆಯಲ್ಲಿ ಕೋವಿಡ್-19 ಸ್ಥಿತಿಗತಿ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 
 
    ಇದುವರೆಗೆ ಕೋವಿಡ್-19 ಸಂಬಂಧ ಜ್ವರ ಪ್ರಕರಣಗಳು, ಕಂಟೈನ್‍ಮೆಂಟ್‍ನಲ್ಲಿ ಇರುವವರು ಮತ್ತಿತರ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು, ಕಳೆದ 28 ದಿನಗಳಿಂದ ಯಾವುದೇ ರೀತಿಯ ಪಾಸಿಟಿವ್ ಪ್ರಕರಣ ಕಂಡುಬರದಿರುವ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುದ್ದಿಗೋಷ್ಠಿ ಸಂದರ್ಭದಲ್ಲಿ ಪ್ರಸ್ತಾಪಿಸಿದ್ದು, ಮೇ 3 ರ ವರೆಗೆ ಲಾಕ್‍ಡೌನ್ ಇರುವುದರಿಂದ ಮತ್ತಷ್ಟು ಮುನ್ನೆಚ್ಚರಿಕೆ ವಹಿಸಬೇಕು ಎಂದರು.  

     ಸರ್ಕಾರದ ನಿರ್ದೇಶನಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಮಾಸ್ಕ್, ಗ್ಲೌಸ್, ಸ್ಯಾನಿಟೈಸರ್ ಮತ್ತಿತರವನ್ನು ಕಂಟೈನ್‍ಮೆಂಟ್ ಪ್ರದೇಶದಲ್ಲಿ ಒದಗಿಸಬೇಕು ಹೃದಯ, ಶ್ವಾಸಕೋಶ ಇತರೆ ಖಾಯಿಲೆಗಳ ಬಗ್ಗೆಯೂ ಸಹ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ಅವರು ಸೂಚಿಸಿದರು.
  
      ಯಾವುದೇ ರೀತಿಯ ರೋಗ ಲಕ್ಷಣ ಬಂದರೂ ಸಹ ಸರಿಯಾಗಿ ತಪಾಸಣೆ ಮಾಡಬೇಕು, ಜಿಲ್ಲೆಯ ಎಲ್ಲಾ ಹಂತದ ಆಸ್ಪತ್ರೆಗಳಲ್ಲಿ ಔಷಧಿಗಳು ದಾಸ್ತಾನು ಇರಬೇಕು. ಸಕಾಲದಲ್ಲಿ ಚಿಕಿತ್ಸೆ ದೊರೆಯುವಂತಾಗಬೇಕು ಎಂದು ವಿ.ಅನ್ಬುಕುಮಾರ್ ಸೂಚಿಸಿದರು. 

      ಆಹಾರ ಪೂರೈಕೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ಕುಟುಂಬಗಳಿಗೂ ಪಡಿತರ ದೊರೆಯುವಂತೆ ನೋಡಿಕೊಳ್ಳಬೇಕು.   ಜಿಲ್ಲೆಯ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಬೇಕು. ಕೂಲಿ ಕಾರ್ಮಿಕರು, ನಿರ್ಗತಿಕರು, ಪಡಿತರ ಚೀಟಿ ಇಲ್ಲದವರು ಎಲ್ಲರಿಗೂ ಆಹಾರ ತಲುಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಸೂಚಿಸಿದರು. 

      ಬಿಪಿಎಲ್ ಕಾರ್ಡ್‍ಗೆ ಅರ್ಜಿ ಸಲ್ಲಿಸಿರುವ ಎಲ್ಲಾ ಕುಟುಂಬಕ್ಕೂ ಸಹ ಆಹಾರ ಪೂರೈಕೆ ಮಾಡಬೇಕು. ಮೇ 3 ರ ವರೆಗೆ ಲಾಕ್‍ಡೌನ್ ಇರುವುದರಿಂದ ಆಹಾರ ಸಿಕ್ಕಿಲ್ಲ ಎಂಬ ದೂರುಗಳು ಬರಬಾರದು ಎಂದರು. 

      ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾತನಾಡಿ, ಕೋವಿಡ್-19 ಸಂಬಂಧ ಜಿಲ್ಲಾಡಳಿತ ಎಲ್ಲಾ ರೀತಿಯ ಮುನ್ನೆಚ್ಚರಿಕೆ ವಹಿಸಿದೆ. ಜಿಲ್ಲೆಯಲ್ಲಿ ಪಡಿತರ ಚೀಟಿ ಇಲ್ಲದವರಿಗೂ ಸಹ ಪಡಿತರ ವಿತರಿಸಲಾಗುತ್ತದೆ. ಲೈನ್‍ಮನೆಗಳಲ್ಲಿ ವಾಸಿಸುವ ಕಾರ್ಮಿಕರು, ವಲಸಿಗ ಕಾರ್ಮಿಕರು ಹೀಗೆ ತಾಲೂಕು ಮಟ್ಟದಲ್ಲಿ ಆಹಾರ ಕಿಟ್ ಪೂರೈಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

      ಆಹಾರ ಇಲಾಖೆಯ ಉಪ ನಿರ್ದೇಶಕರಾದ ಗೌರವ್ ಕುಮಾರ್ ಶೆಟ್ಟಿ ಅವರು ಈಗಾಗಲೇ ಶೇ.93 ರಷ್ಟು ಆಹಾರ ಪೂರೈಕೆಯಾಗಿದ್ದು. ಬಿಪಿಎಲ್ ಕಾರ್ಡ್‍ಗಾಗಿ ಅರ್ಜಿ ಸಲ್ಲಿಸಿರುವ 4,500 ಕುಟುಂಬಗಳಿಗೂ ಆಹಾರ ಪೂರೈಕೆ ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.  

      ಪಡಿತರ ಚೀಟಿ ಇಲ್ಲದ ಲೈನ್‍ಮನೆ ಹಾಗೂ ಕಾರ್ಮಿಕರಿಗೂ ಆಹಾರವನ್ನು ಪೂರೈಸಲಾಗಿದೆ ಎಂದು ನೋಡಲ್ ಅಧಿಕಾರಿಗಳಾದ ರಾಜು, ಭಾರತಿ, ತಮ್ಮಯ್ಯ ಅವರು ಮಾಹಿತಿ ನೀಡಿದರು.

      ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧೀಕ್ಷಕರಾದ ಡಾ.ಲೋಕೇಶ್, ಸಮುದಾಯ ಆರೋಗ್ಯ ವಿಭಾಗದ ಮುಖ್ಯಸ್ಥರಾದ ಡಾ.ರಾಮಚಂದ್ರ ಕಾಮತ್ ಅವರು ಕೋವಿಡ್-19 ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.

     ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸುಮನ್ ಡಿ.ಪನ್ನೇಕರ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ, ನೋಡಲ್ ಅಧಿಕಾರಿಗಳಾದ ಸಿ.ಶಿವಕುಮಾರ್, ಶ್ರೀನಿವಾಸ್, ಜಗನ್ನಾಥ್, ಅರುಂಧತಿ, ಶಶಿಧರ್, ಪೌರಾಯುಕ್ತರಾದ ರಮೇಶ್, ಅಬಕಾರಿ ಉಪ ಆಯುಕ್ತರಾದ ಪಿ.ಬಿಂದುಶ್ರೀ, ಡಿಡಿಪಿಐ ಪಿ.ಎಸ್ ಮಚ್ಚಾಡೋ, ಅಲ್ಪಸಂಖ್ಯಾತರ ಇಲಾಖೆಯ ಲಿಂಗರಾಜು, ಶ್ರೀಧರನ್, ಗಾಯತ್ರಿ, ಆರ್‍ಸಿಎಚ್ ಆಧಿಕಾರಿ ಗೋಪಿನಾಥ್, ಡಾ.ಆನಂದ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶಿವಕುಮಾರ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ರಾಮಚಂದ್ರ, ತಾ.ಪಂ.ಇಒಗಳಾದ ಲಕ್ಷ್ಮೀ, ಸುನೀಲ್ ಕುಮಾರ್ ತಹಶೀಲ್ದಾರರಾದ ಮಹೇಶ್, ನಂದೀಶ್, ಗೋವಿಂದರಾಜು, ಪ.ಪಂ.ಮುಖ್ಯಾಧಿಕಾರಿಗಳಾದ ಶ್ರೀಧರ್, ಸಂಜೀವ್ ಕುಮಾರ್, ರಮೇಶ್ ಇತರರು ಇದ್ದರು.

No comments

Post a Comment