ಮಡಿಕೇರಿ TOC :--ಪಡಿತರ ಚೀಟಿ ಇಲ್ಲದ ವಲಸೆ ಕಾರ್ಮಿಕರು ಹಾಗೂ ಬಡವರಿಗೆ ಪಡಿತರವನ್ನು ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಮತ್ತು ಕೆ.ಜಿ.ಬೋಪಯ್ಯ ಅವರು ಗುರುವಾರ ವಿತರಿಸಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಹಸಿದ ಹೊಟ್ಟೆಗೆ ತಣಿವು ಪೆಟ್ಟಿಗೆ ಹಾಗೂ ದಾನಿಗಳಿಂದ ಸಂಗ್ರಹವಾದ ಆಹಾರವನ್ನು ದಾಸ್ತಾನು ಮಾಡಲಾಗುತ್ತಿದ್ದು ಪಡಿತರ ಚೀಟಿ ಇಲ್ಲದ ವಲಸೆ ಕಾರ್ಮಿಕರು ಮತ್ತು ಬಡವರಿಗೆ ಪಡಿತರವನ್ನು ವಿತರಿಸಲಾಗುತ್ತಿದೆ.
ನಗರದ ಅಂಬೇಡ್ಕರ್ ಭವನದಲ್ಲಿ ಶಾಸಕರಾದ ಅಪ್ಪಚ್ಚು ರಂಜನ್ ಅವರು, ಮೇಕೇರಿ ಮತ್ತು ಹಾಕತ್ತೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಕೆ.ಜಿ ಬೋಪಯ್ಯ ಅವರು ಪಡಿತರ ವಿತರಿಸಿದರು. ಕೆ.ನಿಡುಗಣೆ ಗ್ರಾ.ಪಂ ವ್ಯಾಪ್ತಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಸುನೀಲ್ ಸುಬ್ರಮಣಿ ಅವರು ಪಡಿತರ ವಿತರಿಸಿದರು.
ಕುಟುಂಬಕ್ಕೆ 10 ಕೆ.ಜಿ ಅಕ್ಕಿ, 1 ಕೆ.ಜಿ ಬೇಳೆ, 1 ಕೆಜಿ ಸಕ್ಕರೆ, 1 ಕೆಜಿ ಉಪ್ಪು, 2 ಕೆ.ಜಿ ಗೋಧಿ, 1 ಲೀಟರ್ ಅಡುಗೆ ಎಣ್ಣೆಯನ್ನು ಪಡಿತರ ಚೀಟಿ ಇಲ್ಲದ ವಲಸೆ ಕಾರ್ಮಿಕರು ಹಾಗೂ ಬಡವರಿಗೆ ವಿತರಿಸಲಾಗುತ್ತಿದೆ ಎಂದು ಜಿಲ್ಲಾ ನೋಡಲ್ ಅಧಿಕಾರಿ ರಾಜು ಅವರು ತಿಳಿಸಿದರು.
ತಹಶೀಲ್ದಾರ್ ಮಹೇಶ್, ಪೌರಾಯುಕ್ತರಾದ ಎಂ.ಎಲ್ ರಮೇಶ್, ಶಿರಸ್ತೇದಾರ್ ಪ್ರವೀಣ್ ಕುಮಾರ್, ತಾಹೀರ್, ಬಶೀರ್ ಇತರರು ಇದ್ದರು.
No comments
Post a Comment