ವರದಿ : ಹನೀಫ್ ಕೊಡ್ಲಿಪೇಟೆ
ಮಡಿಕೇರಿ (Times Of Coorg) : ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕಿನ ಕೊಡ್ಲಿಪೇಟೆ ಮೂಲಕ ಹಾಸನ ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಮುಖ ರಾಜ್ಯ
ಹೆದ್ದಾರಿಯನ್ನು ಕೊಡ್ಲಿಪೇಟೆ ಗಡಿ ಭಾಗದ ಶಾಂತಪುರ ಸೇತುವೆಯಲ್ಲಿ ಬಂದ್ ಮಾಡಲಾಗಿದೆ.
ಹಾಸನ ಜಿಲ್ಲೆಯ ಯಸಳೂರು ಠಾಣಾ ಪೊಲೀಸರು ಮಾಡಿದ ಈ ಕ್ರಮದಿಂದಾಗಿ ಕೊಡ್ಲಿಪೇಟೆ ಮತ್ತು
ಸುತ್ತಮುತ್ತಲ ಗ್ರಾಮಗಳ ಜನರು ನಡುಗಡ್ಡೆಯಲ್ಲಿ ಸಿಲುಕಿದಂತಾಗಿದೆ.
ರಾಜ್ಯ ಹೆದ್ದಾರಿಯನ್ನು ಬಂದ್ ಮಾಡಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದ್ದು, ಕೊಡ್ಲಿಪೇಟೆ ಮತ್ತು ಸುತ್ತಮುತ್ತಲ ಗ್ರಾಮಗಳ ರೈತರು ಬೆಳೆದ ಬೆಳೆಗಳನ್ನು ಹಾಸನಕ್ಕೆ ತಲುಪಿಸಲಾಗದೆ ರೈತರು ಸಂಕಷ್ಟಕ್ಕೀಡಾಗಿದೆ. ಯಸಳೂರು ಪೊಲೀಸರ
ಈ ಕ್ರಮದಿಂದಾಗಿ ಅಗತ್ಯ ವಸ್ತುಗಳ ಸರಬರಾ Iಜು ವಾಹನ, ಆಂಬುಲೆನ್ಸ್ ಕೂಡ ಬರಲು
ಸಾಧ್ಯವಾಗುತ್ತಿಲ್ಲ. ಅಗತ್ಯವಸ್ತುಗಳ ಸಾಗಾಟಕ್ಕೆ ಯಾವುದೇ ರೀತಿಯ ತೊಂದರೆ ಮಾಡದಂತೆ
ಸರ್ಕಾರದ ನಿರ್ದೇಶನವಿದ್ದರೂ ರಸ್ತೆ ಬಂದ್ ಮಾಡಿರುವುದು ಸರಿಯಲ್ಲ. ಆದ್ದರಿಂದ ತಕ್ಷಣ
ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಬೇಕು ಎಂದು ಕೊಡ್ಲಿಪೇಟೆ ಗ್ರಾಮ ಪಂಚಾಯತ್
ಸದಸ್ಯ ಕೆ.ಆರ್. ಚಂದ್ರಶೇಖರ್ ಒತ್ತಾಯಿಸಿದ್ದಾರೆ.
ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಔರಂಗಜೇಬ್ ಮಾತನಾಡಿ, ಹಾಸನ ಮತ್ತು ಕೊಡ್ಲಿಪೇಟೆ
ರಸ್ತೆಯನ್ನು ಯಾವುದೇ ಮುನ್ಸೂಚನೆ ಇಲ್ಲದೆ ಬಂದ್ ಮಾಡಿರುವುದರಿಂದ ಈ ಭಾಗದ ಜನರಿಗೆ
ತುಂಬಾ ತೊಂದರೆಯಾಗಿದೆ. ಇದರಿಂದ ಮುಖ್ಯವಾಗಿ ಅಗತ್ಯ ಸೇವೆಗಳಿಗೂ ಅಡಚಣೆಯಾಗಿದೆ.
ಅನಾರೋಗ್ಯ ಪೀಡಿತರನ್ನು ಚಿಕಿತ್ಸೆಗಾಗಿ ಹಾಸನಕ್ಕೆ ಕೊಂಡೊಯ್ಯಲು ತೊಂದರೆಯಾಗುತ್ತಿದೆ.
ಈ ಬಗ್ಗೆ ಈಗಾಗಲೇ ತಹಶೀಲ್ದಾರ್‌ಗೆ ಮನವಿ ನೀಡಿದ್ದೇವೆ. ಆದ್ದರಿಂದ ತಕ್ಷಣ ಈ
ರಸ್ತೆಯನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.
No comments
Post a Comment