ವೈದ್ಯಕೀಯ ಸಿಬ್ಬಂದಿಗಳ ಸೇವೆ ಶ್ಲಾಘನೀಯ :ಅಪ್ಪಚ್ಚು ರಂಜನ್

No comments
    ಮಡಿಕೇರಿ TOC:- ನಮ್ಮ ದೆಶವನ್ನು ಉಳಿಸಲು ಸೈನಿಕರ ಮೊರೆ ಹೋಗುತ್ತೇವೆ. ಹಾಗೆಯೇ ದೆಶದ ಒಳಗಿನ ಜನರ ಆರೋಗ್ಯವನ್ನು ಉಳಿಸಲು ವೈದ್ಯರ ಮೊರೆ ಹೋಗುತ್ತೇವೆ. ಪ್ರತಿಯೊಬ್ಬರೂ ಆರೋಗ್ಯವಾಗಿದ್ದರೆ. ಏನು ಬೇಕಾದರು ಸಾಧನೆ ಮಾಡಬಹುದಾಗಿದೆ ಎಂದು ಶಾಸಕರಾದ ಎಂ.ಪಿ ಅಪ್ಪಚ್ಚು ರಂಜನ್ ಅವರು ತಿಳಿಸಿದ್ದಾರೆ.
        ನಗರದ ಜಿಲ್ಲಾಸ್ಪತ್ರೆಯಲ್ಲಿ ವಿಶ್ವ ಆರೋಗ್ಯ ದಿನದ ಪ್ರಯುಕ್ತ ಮಂಗಳವಾರ ವೈದ್ಯರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಿ ಅವರು ಮಾತನಾಡಿದರು.
       ಜನರು ಆರೋಗ್ಯವನ್ನು ಕಾಪಾಡಲು ವೈದ್ಯಕೀಯ ಸಿಬ್ಬಂದಿಗಳು ಹಗಲಿರುಳು ದುಡಿಯುತ್ತಾರೆ. ಅವರ ಕಾರ್ಯಕ್ಕೆ ಬೆಲೆ ಕಟ್ಟಲು ಸಧ್ಯವಿಲ್ಲ. ಈ ನಿಟ್ಟಿನಲ್ಲಿ ಸಿಬ್ಬಂದಿಗಳ ಸೇವೆಯನ್ನು ಗುರುತಿಸುವ ಕಾರ್ಯ ಮಾಡಬೇಕು. ಇತ್ತೀಚೆಗೆ ವಿಶ್ವಾದ್ಯಂತ ಕೋವಿಡ್-19 ವೇಗವಾಗಿ ಹರಡುತ್ತಿದ್ದು ಜಿಲ್ಲೆಯಲ್ಲಿ ಜಿಲ್ಲಾಡಳತ ಮತ್ತು ವೈದ್ಯಕೀಯ ಸಿಬ್ಬಂದಿಗಳ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿರುವುದರಿಂದ ಕೋವಿಡ್-19 ಹರಡುವಿಕೆಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಅವರು ಹೇಳಿದರು.
       ವಿಧಾನ ಪರಿಷತ್ ಸದಸ್ಯರಾದ ಎಂ.ಪಿ ಸುನೀಲ್ ಸುಬ್ರಮಣಿ ಅವರು ಮಾತನಾಡಿ, ಜಿಲ್ಲಾಡಳಿತ, ಪೊಲೀಸ್, ವೈದ್ಯಕೀಯ ಸಿಬ್ಬಂದಿಗಳು, ಪೌರ ಕಾರ್ಮಿಕರು ಮತ್ತು ಜಿಲ್ಲೆಯ ಜನಪ್ರತಿನಿಧಿಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿರುವುದರಿಂದ ಜಿಲ್ಲೆಯಲ್ಲಿ  ಕೋವಿಡ್-19 ನಿಯಂತ್ರಣದಲ್ಲಿದೆ ಎಂದು ಅವರು ಹೇಳಿದರು.
       ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಕೊಡಗು ವೈದ್ಯಕೀಯ ಕಾಲೇಜಿನ ಡೀನ್ ಡಾ.ಕಾರ್ಯಪ್ಪ, ಅಧೀಕ್ಷಕರಾದ ಡಾ.ಲೋಕೇಶ್, ಡಾ. ಅಜೀಜ್, ಡಾ.ಮಂಜುನಾಥ್, ಮೇರಿ ನಾಣಯ್ಯ, ಅನಿತಾ ಪೂವಯ್ಯ ಇತರರು ಇದ್ದರು.

No comments

Post a Comment