ಹಾಸ್ಯ ನಟ ಬುಲೆಟ್ ಪ್ರಕಾಶ್ ವಿಧಿವಶ

No comments
ಬೆಂಗಳೂರು ( Times Of Coorg) : ಕನ್ನಡದ ಪ್ರಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರು ಅನಾರೋಗ್ಯದ ಕಾರಣದಿಂದ ಸೋಮವಾರದಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಿಡ್ನಿ ಸಮಸ್ಯೆಯಿಂದ ಬಳಲಸುತ್ತಿದ್ದ ಅವರು ಕೆಲವು ದಿನಗಳ ಹಿಂದೆ ನಗರದ ಕನ್ನಿಂಗ್‌ಹ್ಯಾಮ್ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದರು. ಸತತ ಚಿಕಿತ್ಸೆಯ ಬಳಿಕ ಸೋಮವಾರ ಅವರ ಆರೋಗ್ಯ ಸ್ಥಿತಿ ಗಂಭಿರವಾಗಿತ್ತು, ಅವರನ್ನು ವೆಂಟಿಲೇಟರ್‌ ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಸೋಮವಾರ ಮಧ್ಯಾಹ್ನದ ವೇಳೆಗೆ ಸಾವನ್ನಪ್ಪಿದ್ದಾರೆ.
ಬುಲೆಟ್ ಪ್ರಕಾಶ್ ಅವರು ಪತ್ನಿ, ಇಬ್ಬರು ಮಕ್ಕಳನ್ನು ಹಾಗೂ ಅಸಂಖ್ಯ ಅಭಿಮಾನಿಗಳನ್ನು ಅಗಲಿದ್ದಾರೆ. ದುನಿಯಾ ವಿಜಯ್, ದರ್ಶನ್, ಶಿವರಾಜ್ ಕುಮಾರ್ ಅವರೊಂದಿಗೆ ಆತ್ಮೀಯ ಸಂಬಂಧವನ್ನು ಬುಲೆಟ್ ಪ್ರಕಾಶ್ ಹೊಂದಿದ್ದರು.

ದುನಿಯಾ ವಿಜಯ್ ಸೇರಿದಂತೆ ಹಲವು ನಟರು
ಬುಲೆಟ್ ಪ್ರಕಾಶ್ ಅವರನ್ನು ಕಾಣಲು ಆಸ್ಪತ್ರೆಗೆ ದುನಿಯಾ ವಿಜಯ್ ಸೇರಿದಂತೆ ಹಲವು ಖ್ಯಾತ ನಟರು ಆಗಮಿಸಿದ್ದರು. ಬುಲೆಟ್ ಪ್ರಕಾಶ್ ಅವರ ಕುಟುಂಬಕ್ಕೆ ಧೈರ್ಯ ತುಂಬುವ ಕಾರ್ಯ ಮಾಡಿದರು.

ಬುಲೆಟ್ ಪ್ರಕಾಶ್ ಅವರು ಕೆಲ ತಿಂಗಳುಗಳ ಹಿಂದೆ ತೂಕ ಕಳೆದುಕೊಳ್ಳಲು ಶಸ್ತ್ರಚಿಕಿತ್ಸೆಗೆ ಒಳಗಾದರು. ಆಗಿನಿಂದಲೂ ಖಾಯಿಲೆಗಳು ಅವರ ಬೆನ್ನು ಬಿದ್ದವು. ಈ ಹಿಂದೆಯೂ ಅವರು ಆಸ್ಪತ್ರೆಗೆ ದಾಖಲಾಗಿ, ಸಾವು-ಬದುಕಿನ ನಡುವೆ ಹೋರಾಡಿ ಚೇತರಿಸಿಕೊಂಡು ಹೊರಬಂದಿದ್ದರು.

No comments

Post a Comment