ಕೊಡಗು ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸರಳವಾಗಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

No comments
       ಮಡಿಕೇರಿ ಏ.14(Times Of Coorg):-ಭಾರತ ರತ್ನ, ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ ಡಾ.ಬಿ.ಆರ್.ಅಂಬೇಡ್ಕರ್ ಅವರ 129 ನೇ ಜನ್ಮದಿನಾಚರಣೆಯನ್ನು ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ಸರಳವಾಗಿ ಆಚರಿಸಲಾಯಿತು.   

     ನಗರದ ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಸಿ.ಆರ್.ಭಾರತಿ, ತಹಶೀಲ್ದಾರ್ ಮಹೇಶ್, ತಾ.ಪಂ.ಇಒ ಲಕ್ಷ್ಮಿ ಇತರರು ಪುಷ್ಪ ನಮನ ಸಲ್ಲಿಸಿದರು.

No comments

Post a Comment