ಕೊರೋನ ವಿರುದ್ಧ ಜನಜಾಗೃತಿ ಮೂಡಿಸಿದ ವ್ಯಕ್ತಿಯ ಮೇಲೆ ಪ್ರಕರಣ: ಖಂಡನೆ

No comments
ಸಿದ್ದಾಪುರ (Times Of Coorg): ಕೊರೋನ ವೈರಸ್ ಹರಡದಂತೆ ಸಾರ್ವಜನಿಕರಲ್ಲಿ ಧ್ವನಿವರ್ಧಕದ ಮೂಲಕ ಜಾಗೃತಿ ಮೂಡಿಸಿದ ಪತ್ರಕರ್ತ ಹಾಗೂ ಸಾಮಾಜಿಕ ಕಾರ್ಯಕರ್ತ ಎಂ.ಎ ಅಜೀಜ್ ಅವರ ಮೇಲೆ ಪ್ರಕರಣ ದಾಖಲು ಮಾಡಿರುವುದನ್ನು ಸಿದ್ದಾಪುರ ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷ ಎಂ.ಎಸ್ ಶಾಹಿನುಲ್ಲಾ ಖಂಡಿಸಿದ್ದಾರೆ.

ಅಗತ್ಯ ಸಾಮಗ್ರಿಗಳನ್ನು ಖರೀದಿಸಲು ಸಿದ್ದಾಪುರ ಪಟ್ಟಣಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದ ಸಂದರ್ಭ ಜನರು ಗುಂಪು ಕೂಡದಂತೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಧ್ವನಿವರ್ಧಕದ ಮೂಲಕ ಪ್ರಚಾರ ಮಾಡಿದ ಅಜೀಜ್ ವಿರುದ್ಧ ಸಿದ್ದಾಪುರ ಗ್ರಾಮ ಪಂಚಾಯತಿ ಅಧ್ಯಕ್ಷರ ಮಣಿ ಹಾಗೂ ಮಾಜಿ ಉಪಾಧ್ಯಕ್ಷ ಮೂಸಾ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ದೂರು ನೀಡಿರುವುದು ಅತ್ಯಂತ ಖಂಡನೀಯ. ಕೊರೋನ ಮಹಾ ಮಾರಿಯ ವಿರುದ್ಧ ಇಡೀ ಪ್ರಪಂಚ ಒಂದಾಗಿ ಹೋರಾಟ ಮಾಡುತ್ತಿರುವ ಸಂದರ್ಭದಲ್ಲಿ ಇಂತಹ ಬೆಳವಣಿಗೆ ಸರಿಯಾದ ಕ್ರಮವಲ್ಲ ಎಂದ ಅವರು, ಕೊರೋನ ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಡಬೇಕೆಂದು ಕರೆ ನೀಡಿದರು.

No comments

Post a Comment