ಜುಲೈ 1 : ಪತ್ರಿಕಾ ದಿನಾಚರಣೆಯ ಇತಿಹಾಸ

No comments

✍🏻ಅಪ್ಸರ್ ಕೊಡ್ಲಿಪೇಟೆ
ಪ್ರತಿ ವರ್ಷ ಜುಲೈ 1 ರಂದು ನಮ್ಮ ರಾಜ್ಯದಲ್ಲಿ ಪತ್ರಿಕಾ_ದಿನ ಆಚರಿಸಲಾಗುತ್ತದೆ. ಇಂದು ಪತ್ರಿಕೋದ್ಯಮವೆಂಬುದು ಕಾಲದ ಸ್ಥಿತ್ಯಂತರದಲ್ಲಿ ಹಲವು ಬದಲಾವಣೆಗಳನ್ನು ಕಂಡಿದೆ ಪತ್ರಿಕೋದ್ಯಮದ ರೀತಿ, ಸ್ವರೂಪ ಬದಲಾಗಿದೆ. ಮುದ್ರಣ ಮಾಧ್ಯಮದ ಜಾಗವನ್ನು ಬಹುಪಾಲು ಆನ್_ಲೈನ್ ಪತ್ರಿಕೆಗಳು ಆಕ್ರಮಿಸಿಕೊಳ್ಳುತ್ತಿವೆ. ಸಾಮಾಜಿಕ ತಾಣಗಳು ಕೂಡ ಸುದ್ದಿಗಳನ್ನು ಸೆಕೆಂಡು, ಸೆಕೆಂಡಿಗೂ ಹೊತ್ತು ತರುತ್ತವೆ ಎಲೆಕ್ಟ್ರಾನಿಕ್ ಮಾಧ್ಯಮಗಳು ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿಕೊಂಡು ತಾಂತ್ರಿಕವಾಗಿ ಹೆಚ್ಚು ಸಮೃದ್ಧವಾಗುತ್ತಿವೆ. ಇಂದು ಸುದ್ದಿ ತಿಳಿಯಬೇಕೆಂದರೆ ಬಹುಪಾಲು ಮಂದಿ ಪತ್ರಿಕೆಯನ್ನು ಹಿಡಿದುಕೊಂಡು ಕೂರುವುದಿಲ್ಲ. ಕೈಯಲ್ಲಿ ಸ್ಮಾರ್ಟ್_ಫೋನ್ ಟ್ಯಾಬ್ ಇದ್ದರೆ ಸಾಕು, #ಇಂಟರ್ನೆಟ್ ಸಂಪರ್ಕವಿದ್ದರೆ ಜಗತ್ತಿನ ಯಾವ ಭಾಗದ ವಿಷಯವನ್ನು ಕೂಡ ಅಂಗೈಯಲ್ಲಿ ಹಿಡಿದುಕೊಂಡು ನೋಡಬಹುದು ಎಂಬಂತಾಗಿದೆ. ತಂತ್ರಜ್ಞಾನದ ಬೆಳವಣಿಗೆ ಸುದ್ದಿ ಮಾಧ್ಯಮದ ಮೇಲೆ ಕೂಡ ಇಷ್ಟರ ಮಟ್ಟಿನ ಪರಿಣಾಮ ಬೀರಿದೆ.

ಆದರೂ ಕೂಡ ಪತ್ರಿಕೆಗಳನ್ನು ಹಿಡಿದುಕೊಂಡು ಅಕ್ಷರಗಳನ್ನು ಓದುವುದೆಂದರೆ ಅದರ ಮಜಾನೇ ಬೇರೆ, ಕಾಗದದ ಸ್ಪರ್ಶ ಹಿತಾನುಭವ ನೀಡುತ್ತದೆ, ಅದು ಆನ್_ಲೈನ್_ಮಾಧ್ಯಮದಲ್ಲಿ ಸಿಗಲಾರದು ಎಂದು ಹೇಳುವವರು ಈಗಲೂ ಇದ್ದಾರೆ.ಜರ್ಮನ್ ನ ಮತಪ್ರಚಾರಕ ಹೆರ್ಮನ್_ಪ್ರೆಢರಿಕ್_ಮೊಗ್ಲಿಂಗ್ ಕನ್ನಡ ಪತ್ರಿಕೋದ್ಯಮದ ಮೂಲಪುರುಷ ಎಂದು ಕರೆಯಲಾಗುತ್ತದೆ. ಕನ್ನಡದ ಮೊದಲ ಪತ್ರಿಕೆ ಮಂಗಳೂರು_ಸಮಾಚಾರ ವಾಗಿದೆ. ಮೊಗ್ಲಿಂಗ್ ಹುಬ್ಬಳ್ಳಿ ಹಾಗೂ ಗದಗದಲ್ಲಿಯೂ ಕೆಲವು ಕಾಲ ಕಾರ್ಯನಿರ್ವಹಿಸಿದ್ದ ಆಗ ಆ ಭಾಗವು ಧಾರವಾಡ ಜಿಲ್ಲೆಗೆ ಸೇರಿತ್ತು ಮೊಗ್ಲಿಂಗ್ ಧಾರವಾಡ ಜಿಲ್ಲೆಯಿಂದ ಮಂಗಳೂರಿಗೆ ಬಂದು 1838ರಿಂದ 1852ರವರೆಗೆ ಸೇವೆಸಲ್ಲಿಸಿದ. ಈ ಅವಧಿಯಲ್ಲಿ ಆತ ಕೈಗೊಂಡ ಪ್ರಮುಖ ನಿರ್ಧಾರವೆಂದರೆ ಪತ್ರಿಕೆಯೊಂದನ್ನು ಪ್ರಕಟಿಸಿ, ಜನರಿಗೆ ಮಾಹಿತಿ ಒದಗಿಸುವುದು.

1843ರ ಜುಲೈ 1ರಂದು ಮಂಗಳೂರು_ಸಮಾಚಾರ ಎಂಬ ಪತ್ರಿಕೆಯನ್ನು ಹೊರತಂದ. ಇದು ಕನ್ನಡಿಗರನ್ನು ಒಂದುಗೂಡಿಸುವಲ್ಲಿ ಸಹಕಾರಿಯಾಯಿತು.
ಇಂದು ಜುಲೈ 1ರಂದು ಕರ್ನಾಟಕದಲ್ಲಿ ಪತ್ರಿಕಾ ದಿನಾಚರಣೆಯಾಗಿ ಈ ಹಿನ್ನೆಲೆಯಲ್ಲಿ ಆಚರಿಸಲಾಗುತ್ತದೆ.  ಮಂಗಳೂರಿನಲ್ಲಿ ಕನ್ನಡ ಪತ್ರಿಕೋದ್ಯಮದ ಪ್ರಾರಂಭ ಬಾಸೆಲ್_ಮಿಶನ್ ಸಂಸ್ಥೆಯಿಂದ ನಡೆಯಿತು. ಮಂಗಳೂರು_ಸಮಾಚಾರ ವೆಂಬ ಹೆಸರಿನಲ್ಲಿ ಪ್ರಾರಂಭಗೊಂಡ ಕನ್ನಡ ವಾರ ಪತ್ರಿಕೆಯಿಂದ ಕನ್ನಡ ಪತ್ರಿಕೋದ್ಯಮ ಚರಿತ್ರೆ ಕರ್ನಾಟಕದಲ್ಲಿ ಆರಂಭವಾಗುತ್ತದೆ. ಪಾಶ್ಚಾತ್ಯ ಪ್ರಪಂಚದಲ್ಲಿ ಜನಜೀವನದ ಮೇಲೆ ಮುದ್ರಣದ ಪ್ರಬಾವವು ಮೂರು ನಾಲ್ಕು ಶತಮಾನಗಳಿಂದ ಉಂಟಾಗಿದ್ದರೂ ನಮ್ಮಲ್ಲಿ ಈ ವ್ಯವಸ್ಥೆ ಒಂದೂವರೆ ಶತಮಾನದ ಈಚಿನದು. ಈ ಸೌಲಭ್ಯವನ್ನು ಒದಗಿಸಿಕೊಟ್ಟವರು ಪಾಶ್ಚಾತ್ಯರು ಇವರು ಮೊದಲು ಇಲ್ಲಿ ಕಲ್ಲಚ್ಚಿನ ಮುದ್ರಣವನ್ನು ಬೆಳಕಿಗೆ ತಂದರು ತದನಂತರ ಅಚ್ಚುಮೊಳೆಗಳ ಮುದ್ರಣವೂ ಆರಂಭವಾಯಿತು.
(ಸಂಗ್ರಹ-ವಿವಿಧ ಮೂಲಗಳಿಂದ)

No comments

Post a Comment