ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿ ಪ್ರದೇಶ ನಿಷೇಧಿತ ಸ್ಥಳ
ಮಡಿಕೇರಿ (Times Of Coorg):- ಜಿಲ್ಲೆಯಲ್ಲಿ ಜೂನ್ 25 ರಿಂದ ಜುಲೈ 03ರ ವರೆಗೆ (ರಜಾ ದಿನಗಳನ್ನು ಹೊರತುಪಡಿಸಿ) 2020ರ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ ಜಿಲ್ಲಾದಿಕಾರಿ ಹಾಗೂ ಜಿಲ್ಲಾ ದಂಡಾದಿಕಾರಿಯಾದ ಅನೀಸ್ ಕಣ್ಮಣಿ ಜಾಯ್ ಅವರು ಸಂಬಂಧಿತ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿಷೇಧಿತ ಸ್ಥಳ ಎಂದು ಘೋಷಿಸಿ ಆದೇಶಿಸಿದ್ದಾರೆ.
ಈ ಆದೇಶವು ಪರೀಕ್ಷಾ ದಿನಗಳಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ. ಈ ಅವಧಿಯಲ್ಲಿ ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಿದೆ.
ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮತ್ತು ಇನ್ನಿತರೆ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು, ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು/ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ಮತ್ತು ಸದರಿ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ವಿವರ ಇಂತಿದೆ;
ಮಡಿಕೇರಿ ತಾಲ್ಲೂಕು: ಸರ್ಕಾರಿ ಪದವಿ ಪೂರ್ವ ಕಾಲೇಜು ಮಡಿಕೇರಿ, ಸಂತ ಮೈಕಲರ ಪ್ರೌಢ ಶಾಲೆ, ಮಡಿಕೇರಿ (ಅನುದಾನಿತ), ಕರ್ನಾಟಕ ಪನ್ಲಿಕ್ ಶಾಲೆ, ನಾಪೋಕ್ಲು, ಮಡಿಕೇರಿ, ಅರುಣ ಪದವಿ ಪೂರ್ವ ಕಾಲೇಜು, ಚೇರಂಬಾಣೆ (ಅನುದಾನಿತ), ಮೂರ್ನಾಡು ಪ್ರೌಢಶಾಲೆ, ಮೂರ್ನಾಡು. (ಅನುದಾನಿತ), ಸಿದ್ಧಾಪುರ ಪ್ರೌಢಶಾಲೆ ಸಿದ್ಧಾಪುರ (ಅನುದಾನಿತ), ಸಂಪಾಜೆ ಪ್ರೌಢಶಾಲೆ, ಸಂಪಾಜೆ (ಅನುದಾನಿತ), ಸಂತ ಜೋಸೆಫ್ ಕಾನ್ವೆಂಟ್ ಸಂಯುಕ್ತ ಪ್ರೌಢಶಾಲೆ, ಮಡಿಕೇರಿ (ಅನುದಾನಿತ)
ಸೋಮವಾರಪೇಟೆ ತಾಲ್ಲೂಕು: ಸರ್ಕಾರಿ ಪದವಿ ಪೂರ್ವ ಕಾಲೇಜು, ಸೋಮವಾರಪೇಟೆ, ಓ.ಎಲ್.ವಿ.ಆಂಗ್ಲ ಮಾಧ್ಯಮ ಪ್ರೌಢಶಾಲೆ, ಸೋಮವಾರಪೇಟೆ, ಫಾತಿಮಾ ಕಾನ್ವೆಂಟ್ ಪ್ರೌಢಶಾಲೆ, ಕುಶಾಲನಗರ, ಸೋಮವಾರಪೇಟೆ, ಸರ್ಕಾರಿ ಪದವಿ ಪೂರ್ವ ಕಾಲೇಜು, ಕುಶಾಲನಗರ, ಸೋಮವಾರಪೇಟೆ, ಪದವಿ ಪೂರ್ವ ಕಾಲೇಜು, ಶನಿವಾರಸಂತೆ, ಸೋಮವಾರಪೇಟೆ (ಅನುದಾನಿತ), ಸೇಕ್ರೇಡ್ ಹಾರ್ಟ್ ಪ್ರೌಢಶಾಲೆ, ಶನಿವಾರಸಂತೆ (ಅನುದಾನರಹಿತ), ಸರ್ಕಾರಿ ಪದವಿ ಪೂರ್ವ ಕಾಲೇಜು, ಸುಂಟಿಕೊಪ್ಪ, ಸಂತ ಮೇರಿಸ್ ಪ್ರೌಢಶಾಲೆ, ಸುಂಟಿಕೊಪ್ಪ (ಅನುದಾನರಹಿತ), ಹೆಬ್ಬಾಲೆ ಪದವಿ ಪೂರ್ವ ಕಾಲೇಜು, ಹೆಬ್ಬಾಲೆ (ಅನುದಾನಿತ), ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜು, ಕೊಡ್ಲಿಪೇಟೆ (ಅನುದಾನ ರಹಿತ),ಸರ್ಕಾರಿ ಪ್ರೌಢಶಾಲೆ, ನೆಲ್ಲಿಹುದಿಕೇರಿ, ಸೋಮವಾರಪೇಟೆ
ವಿರಾಜಪೇಟೆ ತಾಲ್ಲೂಕು: ಸರ್ಕಾರಿ ಪದವಿ ಪೂರ್ವ ಕಾಲೇಜು, ವಿರಾಜಪೇಟೆ, ಸಂತ ಅನ್ನಮ್ಮ ಪ್ರೌಢಶಾಲೆ, ವಿರಾಜಪೇಟೆ (ಅನುದಾನಿತ), ಸರ್ಕಾರಿ ಪ್ರೌಢಶಾಲೆ, ಗೋಣಿಕೊಪ್ಪ, ಗೋಣಿಕೊಪ್ಪ ಪ್ರೌಢಶಾಲೆ, ಗೋಣಿಕೊಪ್ಪ. (ಅನುದಾನಿತ), ಕರ್ನಾಟಕ ಪಬ್ಲಿಕ್ ಶಾಲೆ, ಪೊನ್ನಂಪೇಟೆ, ವಿರಾಜಪೇಟೆ ತಾಲ್ಲೂಕು, ಶ್ರೀಮಂಗಲ ಪದವಿ ಪೂರ್ವ ಕಾಲೇಜು, ಶ್ರೀಮಂಗಲ (ಅನುದಾನಿತ), ಸರ್ಕಾರಿ ಪ್ರೌಢಶಾಲೆ, ಪಾಲಿಬೆಟ್ಟ, ವಿರಾಜಪೇಟೆ ತಾಲ್ಲೂಕು, ಸರ್ಕಾರಿ ಪ್ರೌಢಶಾಲೆ, ತಿತಿಮತಿ, ವಿರಾಜಪೇಟೆ ತಾಲ್ಲೂಕು.

No comments
Post a Comment