ಕೊಡಗು ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೊರೊನಾ ಪಾಸಿಟಿವ್: ಸೋಂಕಿತರ ಸಂಖ್ಯೆ:46ಕ್ಕೆ ಏರಿಕೆ
ಮಡಿಕೇರಿ (Times Of Coorg): ಜಿಲ್ಲೆಯಲ್ಲಿ ಸೋಮವಾರ ದಿನ ಮೂವರಿಗೆ ಕೊರೊನಾ ಪಾಸಿಟಿವ್ ಧೃಡಪಟ್ಟಿದ್ದು, ಸೋಂಕಿತರ ಸಂಖ್ಯೆ 46ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ ಮೂವರು ಡಿಸ್ಟಾರ್ಜ್ ಆಗಿದ್ದು, 43ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
ಸೋಂಕು ದೃಢಪಟ್ಟಿದ್ದ ಸೋಮವಾರಪೇಟೆ ತಾಲ್ಲೂಕು ನೆಲ್ಲಿಹುದಿಕೇರಿ ಗ್ರಾಮದ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಿಂದ 32 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ.
ವಿರಾಜಪೇಟೆ ತಾಲ್ಲೂಕು ಪಾಲಿಬೆಟ್ಟ ಗ್ರಾಮದ ವ್ಯಕ್ತಿಯ ಪ್ರಾಥಮಿಕ ಸಂಪರ್ಕವಾದ 27 ವರ್ಷದ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿದೆ ಹಾಗೂ
ವಿರಾಜಪೇಟೆ ತಾಲ್ಲೂಕು ಚೆನ್ನಯ್ಯನಕೋಟೆ ಗ್ರಾಮದ ಹೊಲಮಾಳ ಪ್ರದೇಶದ ನಿವಾಸಿ, ಬೆಂಗಳೂರಿನಿಂದ ಜಿಲ್ಲೆಗೆ ಹಿಂದಿರುಗಿದ್ದ 37 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ಕಾಣಿಸಿದ್ದು,
ವಿರಾಜಪೇಟೆ ತಾಲ್ಲೂಕು ಚೆನ್ನಯ್ಯನಕೋಟೆ ಗ್ರಾಮದ ಹೊಲಮಾಳ ಕಂಟೈನ್ಮೆಂಟ್ ಝೋನ್ ವ್ಯಾಪ್ತಿಗೆ ಒಳಪಡುತ್ತದೆ ಎಂದು ಜಿಲ್ಲಾಧಿಕಾರಿ ಅನ್ನೀಸ್ ಕಣ್ಮಣಿ ಜಾಯ್ ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಝೋನ್ ಗಳ ಸಂಖ್ಯೆ 21ಕ್ಕೇರಿಕೆಯಾಗಿದೆ.

No comments
Post a Comment