ಬೆಂಗಳೂರಿನ ಪ್ರಯಾಣದ ಇತಿಹಾಸವಿರುವ ಗಂಡ, ಹೆಂಡತಿ ಮತ್ತು ಎರಡು ವರ್ಷ ವಯಸ್ಸಿನ ಮಗು ಸೇರಿದಂತೆ ಕುಟುಂಬದ 3 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿರುತ್ತದೆ. ಇವರು ವಿರಾಜಪೇಟೆ ತಾಲ್ಲೂಕಿನ ಹುಂಡಿ ಮತ್ತು ಸೋಮವಾರಪೇಟೆ ತಾಲೂಕಿನ ನೆಲ್ಲಿಹುದಿಕೇರಿ ಗ್ರಾಮದಲ್ಲಿ ವಾಸ ಮಾಡಿದ್ದರು.
4ನೇ ಕೋವಿಡ್-19 ಪಾಸಿಟಿವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯಿಂದ ಜಿಲ್ಲೆಗೆ ಹಿಂತಿರುಗಿರುವ 24 ವರ್ಷದ ವ್ಯಕ್ತಿಯೊಬ್ಬರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಇವರು ಸೋಮವಾರಪೇಟೆ ತಾಲ್ಲೂಕು ಶನಿವಾರಸಂತೆಯ ನಿವಾಸಿಯಾಗಿದ್ದಾರೆ.
5ನೇ ಕೋವಿಡ್-19 ಪಾಸಿಟಿವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರಾಜಪೇಟೆ ತಾಲ್ಲೂಕು ಕೊಂಡಂಗೇರಿ ಗ್ರಾಮದ 23 ವರ್ಷದ ವ್ಯಕ್ತಿಯೊಬ್ಬರಿಗೆ ಕೋವಿಡ್-19 ಸೋಂಕು ದೃಢಪಟ್ಟಿರುತ್ತದೆ. ಇವರು ವಿದೇಶದಿಂದ (ಶಾರ್ಜಾ) ಮರಳಿರುತ್ತಾರೆ. 6ನೇ ಪಾಸಿಟಿವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರಪೇಟೆ ತಾಲ್ಲೂಕು ಕುಶಾಲನಗರ ಹೋಬಳಿಯ ಹುಲುಸೆ ಗ್ರಾಮದ 46 ವರ್ಷದ ವ್ಯಕ್ತಿಯಾಗಿದ್ದು, ಇವರಿಗೂ ಕೋವಿಡ್-19 ಸೋಂಕು ದೃಢಪಟ್ಟಿರುತ್ತದೆ. ಇವರು ಬೆಂಗಳೂರಿನಿಂದ ಜಿಲ್ಲೆಗೆ ಪ್ರಯಾಣಿಸಿದವರಾಗಿರುತ್ತಾರೆ. ಸದ್ಯ ಎಲ್ಲಾ ಸೋಂಕಿತ ವ್ಯಕ್ತಿಗಳನ್ನು ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಹೊಸದಾಗಿ ಹುಂಡಿ, ನೆಲ್ಲಿಹುದಿಕೇರಿ ಮತ್ತು ಹುಲುಸೆ ಗ್ರಾಮದಲ್ಲಿ ನಿಯಂತ್ರಿತ ಪ್ರದೇಶಗಳನ್ನು (Containment ZOne) ತೆರೆಯಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಒಟ್ಟು 36 ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 03 ಜನ ಗುಣಮುಖರಾಗಿದ್ದಾರೆ. 33 ಸಕ್ರಿಯ ಪ್ರಕರಣಗಳು ಕೋವಿಡ್-19 ಆಸ್ಪತ್ರೆಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ ಒಟ್ಟು 18 ನಿಯಂತ್ರಿತ (Containment ZOne) ಪ್ರದೇಶಗಳಿವೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

No comments
Post a Comment