ನಾಪೋಕ್ಲು : ಮಾಸ್ಕ್ ಧರಿಸದೆ ಓಡಾಡಿದವರಿಗೆ ದಂಡ
ವರದಿ : ಹಾರಿಸ್ ನಾಪೋಕ್ಲು
ನಾಪೋಕ್ಲು (Times Of Coorg) : ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅವರ ಮಾರ್ಗದರ್ಶನದಲ್ಲಿ ಈ ದಿನ ಕೋವಿಡ್ 19 ರ ಟಾಸ್ಕ್ ಪೋರ್ಸ್ ಸಮಿತಿ ಸದಸ್ಯರು ನಾಪೋಕ್ಲು ಪಟ್ಟಣದಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿರುವ ವ್ಯಕ್ತಿಗಳಿಗೆ ದಂಡ ವಿಧಿಸಲಾಯಿತು.
ಕೊಡಗು ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಪೋಕ್ಲು ಬಾಗದ ಜನತೆಯ ಆರೋಗ್ಯದ ಹಿತದೃಷ್ಟಿಯಿಂದ ಅಂಗನವಾಡಿ ಕಾರ್ಯಕರ್ತೆಯರಾದ ಆಶಾ ಲತಾ , ಆಶಾ,ಅಜಿತ ,ಪಂಚಾಯಿತಿ ಸಿಬ್ಬಂದಿ ಷರ್ಲಿ, ಆರೋಗ್ಯ ಇಲಾಖೆ ಸಿಬ್ಬಂದಿಗಳು ಮಾಸ್ಕ್ ಧರಿಸಿ ಸರ್ಕಾರದ ನಿಯಮ ಪಾಲಿಸಿ ಎಂದು ಜನರಲ್ಲಿ ತಿಳುವಳಿಕೆ ನೀಡುತ್ತಿರುವ, ಸಂದರ್ಭ ಕೆಲವು ಜನರು ನಮ್ಮನ್ನೇ ಗದರಿಸಿ ಆವಾಜ್ ಹಾಕಿದ್ದಾರೆ ಎಂದು ಟಾಸ್ಕ್ ಪೋರ್ಸ್ ಸಮಿತಿ ಸದಸ್ಯರು ಅಳಲು ತೋಡಿಕೊಂಡರು.


No comments
Post a Comment