ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ೬ರಿಂದ೧೦ ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರವೇಶಕ್ಕೆ ಅವಕಾಶ

No comments

ಮಡಿಕೇರಿ (Times Of Coorg):-ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ ೨೦೨೦-೨೧ ನೇ ಸಾಲಿಗೆ ಕೊಡಗು ಜಿಲ್ಲೆಯ ಎರಡು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ೬ ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ೧೯ ಬಾಲಕ ಮತ್ತು ೧೯ ಬಾಲಕಿಯರಿಗೆ ಶೇ ೭೫ ಮೀಸಲಾತಿಯಡಿ ಹಾಗೂ ಹಿಂದುಳಿದ ವರ್ಗಗಳ ಮತ್ತು ಪರಿಶಿಷ್ಠ ಪಂಗಡ ಮತ್ತು ಪ.ಜಾತಿಗೆ ಸೇರಿದ ೧೨ ವಿದ್ಯಾರ್ಥಿಗಳಿಗೆ ಶೇ.೨೫ ಮೀಸಲಾತಿಯಡಿ ಪ್ರವೇಶಕ್ಕೆ ಅವಕಾಶವಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ನಿಂಗರಾಜಪ್ಪ ಅವರು ತಿಳಿಸಿದ್ದಾರೆ.

      ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆಯ ಖ್ಯಾತೆ ಗ್ರಾಮದಲ್ಲಿ ೧ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ರೂ.೫.೦೦ ಕೋಟಿ ವೆಚ್ಚದ ಸುಸಜ್ಜಿತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ವಿರಾಜಪೇಟೆ ತಾಲ್ಲೂಕಿನ ಪೆರುಂಬಾಡಿ ಗ್ರಾಮದಲ್ಲಿ ೧ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ರೂ.೧೨.೦೦ ಕೋಟಿ ವೆಚ್ಚದ ಸುಸಜ್ಜಿತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ.

   ೬ರಿಂದ ೧೦ ನೇ ತರಗತಿವರೆಗಿನ ವಿದ್ಯಾಥಿಗಳಿಗೆ ಪ್ರವೇಶ ಪಡೆಯಬಹುದು. ಉಚಿತ ಹಾಸಿಗೆ ಮತ್ತು ಹೊದಿಕೆ, ಟ್ರಂಕ್ ಮತ್ತು ಉಚಿತ ಶುಚಿ ಕಿಟ್ ಒದಗಿಸಲಾಗುವುದು. ಉಚಿತ ಸಮವಸ್ತç, ಬೂಟು,ಕಾಲು ಚೀಲ, ಉಚಿತ ಪಠ್ಯ ಪುಸ್ತಕ ಮತ್ತು ಲೇಖನ ಸಾಮಾಗ್ರಿ, ಉಚಿತ ವೈದ್ಯಕೀಯ ಸೌಲಭ್ಯ/ ಪ್ರತಿ ಎರಡು ತಿಂಗಳಿಗೊಮ್ಮೆ ಕ್ಷೌರ ವೆಚ್ಚ ರೂ.೬೦ ರಂತೆ, ವಿದ್ಯಾರ್ಥಿಗಳಿಗೆ ಉಚಿತ ವಸತಿಯೊಂದಿಗೆ ಮಾಸಿಕ ರೂ.೧೫೦೦/- ಬೋಜನಾ ವೆಚ್ಚ ಭರಿಸಲಾಗುವುದು. ವಿದ್ಯಾರ್ಥಿಗಳಿಗೆ ಕ್ರೀಡಾ ಸಾಮಾಗ್ರಿ & ಗ್ರಂಥಾಲಯ, ಕಂಪ್ಯೂಟರ್ ಲ್ಯಾಬ್ ವ್ಯವಸ್ಥೆ ಇದೆ. ಅಗತ್ಯ ಮಾಹಿತಿಗಾಗಿ ವಸತಿ ಶಾಲೆಯ ದೂರವಾಣಿ ಸಂಖ್ಯೆ :೦೮೨೭೪-೨೯೮೯೫೬ (ವೀರಾಜಪೇಟೆ) ೯೭೪೧೨೦೯೮೨೬ ಮತ್ತು ೭೬೭೬೪೭೩೭೬೭(ಸೋಮವಾರಪೇಟೆ) ಹಾಗೂ  ಇಲಾಖಾ ವೆಬ್‌ಸೈಟ್ https://gokdom.kar.nic.xn--in-muhzkzaz/ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, “ಮಾಹಿತಿ ಕೇಂದ್ರ” ಮೌಲಾನಾ ಅಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಕೊಡಗು ಜಿಲ್ಲೆ, ಮಡಿಕೇರಿ ನಕಛೇರಿ ದೂರವಾಣಿ ಸಂಖ್ಯೆ: ೦೮೨೭೨-೨೨೦೨೧೪/೨೨೫೫೨೮ ಸಂಪರ್ಕಿಸುವAತೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ನಿಂಗರಾಜಪ್ಪ ಅವರು ತಿಳಿಸಿದ್ದಾರೆ.

No comments

Post a Comment