ಕೊಡಗು ಜಿಲ್ಲೆಯಲ್ಲಿ 7 ಹೊಸ ಕೋವಿಡ್-19 ಪ್ರಕರಣಗಳು ಧೃಡ : ಸೋಂಕಿತರ ಸಂಖ್ಯೆ 54ಕ್ಕೆ ಏರಿಕೆ

No comments

ಮಡಿಕೇರಿ (Times Of Coorg) : ಕೊಡಗು ಜಿಲ್ಲೆಯಲ್ಲಿ ಮತ್ತೆ ಕೊರೋನಾ ಸೋಂಕಿತರ ಏರಿಕೆಯಾಗಿದೆ. ಇಂದು ಜಿಲ್ಲಾಧಿಕಾರಿಯವರ ಮಾಹಿತಿಯಂತೆ 7 ಮಂದಿಗೆ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 54ಕ್ಕೇರಿದೆ. 03 ಪ್ರಕರಣಗಳು ಮುಖವಾಗಿದೆ. ಸದ್ಯ ಆಸ್ಪತ್ರೆಯಲ್ಲಿ 51 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ 23 ನಿಯಂತ್ರಿತ ವಲಯಗಳಿವೆ.

ಜಿಲ್ಲೆಯಲ್ಲಿ ಹೊಸದಾಗಿ 07 ಕೋವಿಡ್ ಪ್ರಕರಣಗಳು ವರದಿಯಾಗಿದೆ. 

1. ಸೋಮವಾರಪೇಟೆ ತಾಲ್ಲೂಕು ನೆಲ್ಲಿಹುದಿಕೇರಿ ಗ್ರಾಮದಲ್ಲಿ ಈ ಹಿಂದೆ ಸೋಂಕು ದೃಢಪಟ್ಟ ವ್ಯಕ್ತಿಯ ಪ್ರಾಥಮಿಕ ಸಂಪರ್ಕದ 61 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ.

2. ಸೋಮವಾರಪೇಟೆ ತಾಲ್ಲೂಕು ನೆಲ್ಲಿಹುದಿಕೇರಿ ಗ್ರಾಮದಲ್ಲಿ ಈ ಹಿಂದೆ ಸೋಂಕು ದೃಢಪಟ್ಟ ವ್ಯಕ್ತಿಯ ಪ್ರಾಥಮಿಕ ಸಂಪರ್ಕದ 43 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ.

3. ಸೋಮವಾರಪೇಟೆ ತಾಲ್ಲೂಕು ನೆಲ್ಲಿಹುದಿಕೇರಿ ಗ್ರಾಮದಲ್ಲಿ ಈ ಹಿಂದೆ ಸೋಂಕು ದೃಢಪಟ್ಟ ವ್ಯಕ್ತಿಯ ಪ್ರಾಥಮಿಕ ಸಂಪರ್ಕದ 11 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ.

4. ಸೋಮವಾರಪೇಟೆ ತಾಲ್ಲೂಕು ನೆಲ್ಲಿಹುದಿಕೇರಿ ಗ್ರಾಮದಲ್ಲಿ ಈ ಹಿಂದೆ ಸೋಂಕು ದೃಢಪಟ್ಟ ವ್ಯಕ್ತಿಯ ಪ್ರಾಥಮಿಕ ಸಂಪರ್ಕದ 38 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ.

5. ಸೋಮವಾರಪೇಟೆ ತಾಲ್ಲೂಕು ನೆಲ್ಲಿಹುದಿಕೇರಿ ಗ್ರಾಮದಲ್ಲಿ ಈ ಹಿಂದೆ ಸೋಂಕು ದೃಢಪಟ್ಟ ವ್ಯಕ್ತಿಯ ಪ್ರಾಥಮಿಕ ಸಂಪರ್ಕದ 29 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ.

6. ಸೋಮವಾರಪೇಟೆ ತಾಲ್ಲೂಕು ಶನಿವಾರಸಂತೆಯ ಶಿರಂಗಾಲ ಗ್ರಾಮದಲ್ಲಿ ಈ ಹಿಂದೆ ಸೋಂಕು ದೃಢಪಟ್ಟ ವ್ಯಕ್ತಿಯ ದ್ವಿತೀಯ ಸಂಪರ್ಕವಾದ ಶನಿವಾರಸಂತೆಯ ಶಿರಂಗಾಲ ಗ್ರಾಮದ ಗುಂಡೂರಾವ್ ಬಡಾವಣೆ ನಿವಾಸಿ 47 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ.

7. ವಿರಾಜಪೇಟೆ ತಾಲ್ಲೂಕು ತಿತಿಮತಿ ಗ್ರಾಮದ 65 ವರ್ಷದ ವ್ಯಕ್ತಿಯೊಬ್ಬರಿಗೆ ಜ್ವರದ ಲಕ್ಷಣವಿದ್ದು, ಅವರಿಗೆ ಸೋಂಕು ದೃಢಪಟ್ಟಿದೆ.

ಮೇಲಿನ ಮೊದಲ 06 ಪ್ರಕಣಗಳು ನಿಯಂತ್ರಿತ ಪ್ರದೇಶದಲ್ಲಿಯೇ ವರದಿಯಾಗಿರುವುದರಿಂದ ಹೊಸದಾಗಿ ನಿಯಂತ್ರಿತ ಪ್ರದೇಶಗಳನ್ನು ತೆರೆದಿರುವುದಿಲ್ಲ.
ಜಿಲ್ಲೆಯಲ್ಲಿ ಹೊಸದಾಗಿ ವಿರಾಜಪೇಟೆ ತಾಲ್ಲೂಕಿನ ತಿತಿಮತಿ ಗ್ರಾಮದಲ್ಲಿ ನಿಯಂತ್ರಿತ ಪ್ರದೇಶವನ್ನು ತೆರೆಯಲಾಗಿದೆ.
 ಹೀಗಾಗಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ:54 ಕ್ಕೇರಿದ್ದು, 03 ಪ್ರಕರಣ ಬಿಡುಗಡೆಗೊಂಡಿರುತ್ತಾರೆ. 51 ಪ್ರಕರಣಗಳು ಆಸ್ಪತ್ರೆಯಲ್ಲಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.  ಜಿಲ್ಲೆಯಲ್ಲಿರುವ ನಿಯಂತ್ರಿತ ಪ್ರದೇಶಗಳ ಸಂಖ್ಯೆ ಒಟ್ಟು-23 ಆಗಿರುತ್ತದೆ.

No comments

Post a Comment