ಕೊಡಗು ಜಿಲ್ಲೆಯಲ್ಲಿ 210 ಮಂದಿ ಕೊರೊನಾ ಸೋಂಕಿನಿಂದ ಗುಣಮುಖ

No comments

ಮಡಿಕೇರಿ (Times Of Coorg): ಕೊಡಗು ಜಿಲ್ಲೆಯಲ್ಲಿ ಇದುವರೆಗೆ 282 ಜನರಿಗೆ ಕೊರೊನಾ ಸೋಂಕು ಧೃಡಪಟ್ಟಿದ್ದು, ಇದರಲ್ಲಿ 210 ಜನರು ಕೊರೊನಾ ಸೋಂಕಿನಿಂದ ಮುಕ್ತರಾಗಿದ್ದಾರೆ.
ಐವರು ಸೋಂಕಿನಿಂದ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳು 67 ಆಗಿವೆ.
ಹಾಗೂ ನಿಯಂತ್ರಿತ ಪ್ರದೇಶಗಳ ಸಂಖ್ಯೆ 108ಕ್ಕೆ ಇಳಿಕೆಯಾಗಿದೆ. ಮಂಗಳವಾರ ದಿನ ಹೊಸದಾಗಿ ಒಬ್ಬರಿಗೆ ಸೋಂಕು ಧೃಡಪಟ್ಟಿದ್ದು, 09 ಮಂದಿ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ ಆಸ್ಪತ್ರೆಯಲ್ಲಿ 22 ಮಂದಿ, ಕೋವಿಡ್ ಕೇರ್ ಸೆಂಟರ್ ನಲ್ಲಿ 29 ಹಾಗೂ 16 ಮಂದಿ ಹೋಂ ಐಸೋಲೇಶನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

No comments

Post a Comment