ಡಾ.ಬಾಬು ಜಗಜೀವನ್ ರಾಮ್‍ರವರ 34 ನೇ ಪುಣ್ಯ ಸ್ಮರಣೆ
ಮಡಿಕೇರಿ (Times Of Coorg):-ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ 34 ನೇ ಪುಣ್ಯ ಸ್ಮರಣೆ ಕಾರ್ಯಕ್ರಮವು ನಗರದ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಸೋಮವಾರ ಸರಳವಾಗಿ ನಡೆಯಿತು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ದೀಪ ಬೆಳಗಿಸಿ ಡಾ.ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಭಾರತಿ ಇತರರು ಇದ್ದರು.



No comments
Post a Comment