ಕೊಡಗು ಜಿಲ್ಲೆಯಲ್ಲಿ ಮತ್ತೆ 4 ಹೊಸ ಕೋವಿಡ್ ಸೋಂಕು ಪ್ರಕರಣಗಳು ಧೃಡ : ಸೋಂಕಿತರ ಸಂಖ್ಯೆ 58ಕ್ಕೆ ಏರಿಕೆ
ಮಡಿಕೇರಿ (Times Of Coorg) : ಕೊಡಗು ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು ಇಂದು ಬೆಳಗ್ಗೆ 7 ಜನರಲ್ಲಿ ಸೋಂಕು ಧೃಡಪಟ್ಟಿತ್ತು. ಆದರೆ ಈಗ ಬಂದ ಜಿಲ್ಲಾಧಿಕಾರಿಗಳ ವರದಿ ಪ್ರಕಾರ ಹೊಸ 4 ಸೋಂಕು ಪ್ರಕರಣಗಳು ಧೃಡಪಟ್ಟಿದೆ. ಇಂದು ಒಂದೇ ದಿನ 11 ಜನರಲ್ಲಿ ಕೋವಿಡ್ ಸೋಂಕು ಧೃಡಪಟ್ಟಿದ್ದು ಸೋಂಕಿತರ ಸಂಖ್ಯೆ 58ಕ್ಕೆ ಏರಿಕೆಯಾಗಿದೆ. 3 ಗುಣಮುಖ ಪ್ರಕರಣಗಳಾಗಿವೆ.
ಕೊಡಗು ಜಿಲ್ಲೆಯಲ್ಲಿ ಹೊಸದಾಗಿ ಈಗ 04 ಕೋವಿಡ್ ಪ್ರಕರಣಗಳು ವರದಿಯಾಗಿದೆ.
1. ಸೋಮವಾರಪೇಟೆ ತಾಲ್ಲೂಕು ನೆಲ್ಲಿಹುದಿಕೇರಿ ಗ್ರಾಮದಲ್ಲಿ ಈ ಹಿಂದೆ ಸೋಂಕು ದೃಢಪಟ್ಟ ವ್ಯಕ್ತಿಯ ಪ್ರಾಥಮಿಕ ಸಂಪರ್ಕದ ವಿರಾಜಪೇಟೆ ತಾಲ್ಲೂಕು ಹುಂಡಿ ಗ್ರಾಮದ 03 ತಿಂಗಳ ಮಗುವಿಗೆ ಸೋಂಕು ದೃಢಪಟ್ಟಿದೆ.
2. ಸೋಮವಾರಪೇಟೆ ತಾಲ್ಲೂಕು ನೆಲ್ಲಿಹುದಿಕೇರಿ ಗ್ರಾಮದಲ್ಲಿ ಈ ಹಿಂದೆ ಸೋಂಕು ದೃಢಪಟ್ಟ ವ್ಯಕ್ತಿಯ ಪ್ರಾಥಮಿಕ ಸಂಪರ್ಕದ ವಿರಾಜಪೇಟೆ ತಾಲ್ಲೂಕು ಹುಂಡಿ ಗ್ರಾಮದ 06 ವರ್ಷದ ಮಗುವಿಗೆ ಸೋಂಕು ದೃಢಪಟ್ಟಿದೆ.
3. ಸೋಮವಾರಪೇಟೆ ತಾಲ್ಲೂಕು ನೆಲ್ಲಿಹುದಿಕೇರಿ ಗ್ರಾಮದಲ್ಲಿ ಈ ಹಿಂದೆ ಸೋಂಕು ದೃಢಪಟ್ಟ ವ್ಯಕ್ತಿಯ ಪ್ರಾಥಮಿಕ ಸಂಪರ್ಕದ ವಿರಾಜಪೇಟೆ ತಾಲ್ಲೂಕು ಹುಂಡಿ ಗ್ರಾಮದ 56 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ.
4. ಸೋಮವಾರಪೇಟೆ ತಾಲ್ಲೂಕು ನೆಲ್ಲಿಹುದಿಕೇರಿ ಗ್ರಾಮದಲ್ಲಿ ಈ ಹಿಂದೆ ಸೋಂಕು ದೃಢಪಟ್ಟ ವ್ಯಕ್ತಿಯ ಪ್ರಾಥಮಿಕ ಸಂಪರ್ಕದ ವಿರಾಜಪೇಟೆ ತಾಲ್ಲೂಕು ಹುಂಡಿ ಗ್ರಾಮದ 87 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ.
ಮೇಲಿನ ಮೊದಲ 04 ಪ್ರಕಣಗಳು ನಿಯಂತ್ರಿತ ಪ್ರದೇಶದಲ್ಲಿಯೇ ವರದಿಯಾಗಿರುವುದರಿಂದ ಹೊಸದಾಗಿ ನಿಯಂತ್ರಿತ ಪ್ರದೇಶಗಳನ್ನು ತೆರೆದಿರುವುದಿಲ್ಲ.
ಈ ಹಿಂದೆ ಸೋಂಕು ದೃಢಪಟ್ಟ 47 ವರ್ಷದ ವ್ಯಕ್ತಿಯು ಶನಿವಾರಸಂತೆಯ ಗುಂಡೂರಾವ್ ಬಡಾವಣೆಯಲ್ಲಿ ವಾಸ ಮಾಡಿದ್ದರಿಂದ ಶನಿವಾರಸಂತೆಯ ಗುಂಡೂರಾವ್ ಬಡಾವಣೆಯಲ್ಲಿ ಹೊಸದಾಗಿ ನಿಯಂತ್ರಿತ ಪ್ರದೇಶವನ್ನು ತೆರೆಯಲಾಗಿದೆ. ಹೀ ಗಾಗಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ:58 ಕ್ಕೇರಿದ್ದು, 03 ಪ್ರಕರಣ ಗುಣಮುಖವಾಗಿರುತ್ತದೆ, 55 ಪ್ರಕರಣಗಳು ಸಕ್ರಿಯವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿರುವ ನಿಯಂತ್ರಿತ ಪ್ರದೇಶಗಳ ಸಂಖ್ಯೆ ಒಟ್ಟು 24 ಆಗಿರುತ್ತದೆ.

No comments
Post a Comment