ನಾಪೋಕ್ಲು ವಲಯ ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ರಾಜ್ಯಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ
ವರದಿ : ಹಾರಿಸ್ ನಾಪೋಕ್ಲು
ನಾಪೋಕ್ಲು (Times Of Coorg) : ಡಿ.ಕೆ.ಶಿವಕುಮಾರ್ ರವರು ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಪದಗ್ರಹಣ ಮಾಡುತ್ತಿರುವ ಹಿನ್ನೆಲೆಯಲ್ಲಿ ನಾಪೋಕ್ಲು ವಲಯ ಕಾಂಗ್ರೆಸ್ ವತಿಯಿಂದ ಸಮೀಪದ ಚೆರಿಯಪರಂಬು ಶಾದಿ ಮಹಲ್ ನಲ್ಲಿ ನೇರ ವೀಕ್ಷಣೆಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು
ಕಾರ್ಯಕ್ರಮವನ್ನು ಪಕ್ಷದ ಹಿರಿಯ ಮುಕಂಡ ಅರೆಯಡ ಸೋಮಪ್ಪ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು
ನಂತರ ಕಾರ್ಯಕ್ರಮವನ್ನುಉದ್ದೇಶಿಸಿ ಮಾತನಾಡಿದ ಪಕ್ಷದ ನಾಪೋಕ್ಲು ಬ್ಲಾಕ್ ಉಸ್ತುವಾರಿ ಹೇಮನಾಥ ಶೆಟ್ಟಿ
ಡಿ.ಕೆ.ಶಿವಕುಮಾರ್ ರವರು ತಳಮಟ್ಟದಿಂದ ಪಕ್ಷದ ಸಂಘಟನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಪಕ್ಷದ ಬಲವರ್ಧನೆಗೆ ಸಾಕಷ್ಟು ಪ್ರಮಾಣದಲ್ಲಿ ಹಂತ ಹಂತವಾಗಿ ಶ್ರಮ ಪಟ್ಟಿದ್ದಾರೆ. ಕೆಪಿಸಿಸಿ ನೂತನ ಅಧ್ಯಕ್ಷ ಗಾದಿಗೆ ಏರಿರುವುದು ಪ್ರತಿಯೊಬ್ಬ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರಿಗೆ ಸಂತಸ ತಂದಿದೆ . ಮತ್ತು ಕಾರ್ಯಕರ್ತರಲ್ಲಿ ಆತ್ಮಸ್ಥೈರ್ಯ ಇನ್ನಷ್ಟು ಹೆಚ್ಚಿದಂತಾಗಿದೆ. ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ಡಿ.ಕೆ. ಶಿವಕುಮಾರ್ ಅವರ ಸಾರಥ್ಯದಲ್ಲಿ ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿಪ್ರತಿಯೊಬ್ಬ ನಿಷ್ಠಾವಂತ ಕಾರ್ಯಕರ್ತರು ಇಂದಿನಿಂದಲೇ ಪಕ್ಷ ಸಂಘಟನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದರು.
ಬೆಳಿಗ್ಗೆ ಪ್ರಾರಂಭ ವಾದ ಕಾರ್ಯಕ್ರಮದಲ್ಲಿ ಸುಮಾರು 100 ಕಿಂತಲೂ ಹೆಚ್ಚು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಾಲ್ಗೊಂಡ್ಡು ಕಾರ್ಯಕ್ರಮ ಯಶಸ್ವಿ ಗೊಳಿಸಿದರು.
ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ಊಟದ ವ್ಯವಸ್ಥೆ ಕೂಡ ಮಾಡಲಾಗಿತ್ತು. ಈ ಸಂದರ್ಭ ಪಕ್ಷದ ಹಿರಿಯ ಮುಕಂಡ ಅರೆಯಡ ಸೋಮಪ್ಪ , ಕಿಸಾನ್ ಘಟಕದ ಅಧ್ಯಕ್ಷ ನೆರವಂಡ ಉಮೇಶ್ ,. ನಾಪೋಕ್ಲು ಬ್ಲಾಕ್ ಅಧ್ಯಕ್ಷ ಕೆ ಎ ಇಸ್ಮಾಯಿಲ್ , ವಲಯ ಅಧ್ಯಕ್ಷ ಕುಸು ಕುಶಾಲಪ್ಪ, ಅಲ್ಪ ಸಂಖ್ಯಾತರ ರಾಜ್ಯ ಉಪಾಧ್ಯಕ್ಷ ಎ ಕೆ ಹಾರಿಸ್, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸುದೈ ನಾಣಯ್ಯ. ನಾಪೋಕ್ಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸಾಬ ತಿಮ್ಮಯ್ಯ, ಸಲೀಂ ಹಾರಿಸ್ , ಸಿ ಹೆಚ್ ಅಹಮದ್. ಯುವ ಕಾಂಗ್ರೆಸ್ ಕಾರ್ಯದರ್ಶಿ ಸಿರಾಜ್ ಪರವಂಡ., ಸೇರಿದಂತೆ ಪಕ್ಷದ ನಾಯಕರು ಇನ್ನಿತರರು ಹಾಜರಿದ್ದರು..

No comments
Post a Comment