ನೀಟ್ ಕುಂದ್ ಸೇತುವೆ ಮೇಲೆ ಸಂಚಾರಕ್ಕೆ ಅನುವು

No comments

  ಮಡಿಕೇರಿ (Times Of Coorg):-ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಮುಂಗಾರು ಮಳೆಯು ಹೆಚ್ಚಾಗಿದ್ದು,  ವಿರಾಜಪೇಟೆ ತಾಲ್ಲೂಕಿನ ಬಿರುನಾಣಿ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ನೀಟ್ ಕುಂದ್‍ನ ಸೇತುವೆಯ ಮೇಲೆ ನೀರು ಬಂದಿದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಸದರಿ ಸೇತುವೆಯ ಮೇಲೆ ಸಂಚಾರವನ್ನು ನಿಷೇಧಿಸಲಾಗಿತ್ತು.

     ಪ್ರಸ್ತುತ ಈ ಭಾಗದಲ್ಲಿ ಮಳೆ ಕಡಿಮೆಯಾಗಿದ್ದು, ನೀಟ್ ಕುಂದ್ ಸೇತುವೆಯ ಕೆಳಗೆ ಸುಮಾರು ಎರಡು ಅಡಿಗೆ ನೀರು ಇಳಿದಿರುವುದರಿಂದ ಸದರಿ ಸೇತುವೆಯ ಮೇಲೆ ಸಾರ್ವಜನಿಕರಿಗೆ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. 

      ಈ ಪ್ರದೇಶಕ್ಕೆ ಬಿರುನಾಣಿಯ ಪೋಲೀಸ್‍ಔಟ್ ಪೆÇೀಸ್ಟ್‍ನ ಸಿಬ್ಬಂದಿಗಳು ಆಗಾಗ್ಗೆ ಭೇಟಿ ನೀಡಿ ಪರಿಶೀಲಿಸುತ್ತಿದ್ದು, ಅಗತ್ಯವಿದ್ದಲ್ಲಿ ಜಿಲ್ಲಾಡಳಿತದ ವತಿಯಿಂದ ಪರಿಹಾರ ಕಾರ್ಯಾಚರಣೆ ತಂಡವನ್ನು ತಕ್ಷಣವೇ ಕಳುಹಿಸಲಾಗುವುದು. ಆದ್ದರಿಂದ ಆ ಭಾಗದ ಸಾರ್ವಜನಿಕರು ಯಾವುದೇ ಭಯ ಅಥವಾ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.


No comments

Post a Comment