ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರ ಮತ್ತೆ ಸೀಲ್ ಡೌನ್

No comments

   ವರದಿ :ಹಾರಿಸ್ ನಾಪೋಕ್ಲು
ನಾಪೋಕ್ಲು (Times Of Coorg) : ಎಮ್ಮೆಮಾಡು  ಗ್ರಾಮದಲ್ಲಿ ದಿನೇದಿನೇ ಹೆಚ್ಚುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆ ಈ ದಿನ ಮತ್ತೊಬ್ಬರಿಗೆ ಕೊರೋನಾ ಸೋಂಕು .

 ಎಮ್ಮೆಮಾಡು ಗ್ರಾಮದ ನಿವಾಸಿ 52 ವರ್ಷದ ಪುರುಷನಿಗೆ ಈ ದಿನ ಕೊರೋನಾ ಪಾಸಿಟಿವ್ ವರದಿ ಬಂದಿದ್ದು
ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಕಂದಾಯ ಮತ್ತು ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಸೋಂಕಿತನ ಮನೆಯನ್ನು ಸೀಲ್ ಡೌನ್ ಮಾಡಲಾಯಿತು

ಸೋಂಕಿತ ವ್ಯಕ್ತಿ ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿರುವುದರಿಂದ ಆಸ್ಪತ್ರೆಯನ್ನು ಸ್ಯಾನಿಟೈಸರ್ ಮಾಡಲು ಆರೋಗ್ಯ ಕೇಂದ್ರವನ್ನು ಮುಂದಿನ 24 ಗಂಟೆಗಳವರೆಗೆ  ಸೀಲ್ ಡೌನ್ ಮಾಡಲಾಯಿತು.


No comments

Post a Comment