ವಿರಾಜಪೇಟೆ ತಾಲ್ಲೂಕು ವ್ಯಾಪ್ತಿಯ ಕೋವಿಡ್ ಆರೈಕೆ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ
ವಿರಾಜಪೇಟೆ (Times Of Coorg) : ವಿರಾಜಪೇಟೆ ತಾಲ್ಲೂಕಿನಲ್ಲಿ ಕೋವಿಡ್ -19 ಸೋಂಕಿತರ ಆರೈಕೆಗಾಗಿ ಗುರುತಿಸಲಾದ 2 ಕೋವಿಡ್ ಆರೈಕೆ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಗುರುವಾರ ಭೇಟಿನೀಡಿದರು. ವಿರಾಜಪೇಟೆ ತಾಲ್ಲೂಕು ತಹಶೀಲ್ದಾರ್, ಜಿಲ್ಲಾ ಸಾಂಕ್ರಾಮಿಕ ರೋಗಶಾಸ್ತ್ರಜ್ಞರು, ಹೋಬಳಿ ನೋಡಲ್ ಅಧಿಕಾರಿ ಮತ್ತು ಜಿಲ್ಲಾ ಐಟಿಡಿಪಿ ಅಧಿಕಾರಿಗಳೊಂದಿಗೆ ದಿನಾಂಕ 23.07.2020ರಂದು ಭೇಟಿ ನೀಡಿ ಆಹಾರ ಮತ್ತು ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು.
ಗುರುತಿಸಲಾದ 2 ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಒಟ್ಟು 240 ಹಾಸಿಗೆಗಳಿದ್ದು, ಇವುಗಳಲ್ಲಿ ಲಕ್ಷಣರಹಿತ ಅಥವಾ ಅಲ್ಪ ಲಕ್ಷಣಗಳನ್ನು ಹೊಂದಿರುವ ಕೋವಿಡ್-19 ಸೋಂಕಿತರಿಗೆ ಆರೈಕೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.



No comments
Post a Comment