ಮಡಿಕೇರಿ : ಸಿಇಟಿ ಪರೀಕ್ಷೆ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವಿದ್ಯಾರ್ಥಿ ಅಪಘಾತದಲ್ಲಿ ದುರ್ಮರಣ

No comments

ಮಡಿಕೇರಿ (Times Of Coorg) : ಸಿಇಟಿ ಪರೀಕ್ಷೆ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಸಂದರ್ಭ ನಡೆದ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಘಟನೆ ಮಡಿಕೇರಿ ಸಮೀಪದ ಸಂಪಿಗೆಕಟ್ಟೆ ಬಳಿ ಸಂಭವಿಸಿದೆ.ಶ್ರೇಯಸ್ (18) ಮೃತ ವಿದ್ಯಾರ್ಥಿ. ಮತ್ತೊಬ್ಬ ವಿದ್ಯಾರ್ಥಿ ಶಿಬಿ (18) ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ನಂಜರಾಯಪಟ್ಟಣ ಗ್ರಾಮದ ಇಬ್ಬರು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಮುಗಿಸಿ ಸ್ಕೂಟಿಯಲ್ಲಿ ಮನೆಗೆ ಹಿಂತಿರುಗುತ್ತಿದ್ದ ಸಂದರ್ಭ ಆಲ್ಟೋ ಕಾರಿನ ನಡುವೆ ಅಪಘಾತ ಸಂಭವಿಸಿದೆ  ಎಂದು ತಿಳಿದು ಬಂದಿದೆ

No comments

Post a Comment