ನಾಪೋಕ್ಲು ಗ್ರಾಮ ಪಂಚಾಯಿತಿ ವತಿಯಿಂದ ಅನಗತ್ಯವಾಗಿ ಜನರು ಹೊರಬರದಂತೆ ಧ್ವನಿವರ್ಧಕದ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ
ವರದಿ : ಹಾರಿಸ್ ನಾಪೋಕ್ಲು
ನಾಪೋಕ್ಲು (Times Of Coorg): ವ್ಯಾಪ್ತಿಯಲ್ಲಿ ಮಹಾಮಾರಿ ಕೊರೋನಾ ದೃಢಪಟ್ಟ ಹಿನ್ನೆಲೆಯಲ್ಲಿ ಸೋಂಕಿತ ಮಹಿಳೆ ವಾಸವಿದ್ದ ಬೇತು ರಸ್ತೆಯ ಕೆನರಾ ಬ್ಯಾಂಕ್ ಮಳಿಗೆಯನ್ನು ಕಂಟೋನ್ಮೆಂಟ್ ಝೋನ್ ಎಂದು ಘೋಷಿಸಿ ಸೀಲ್ ಡೌನ್ ಮಾಡಲಾಯಿತು.
ಮುನ್ನೆಚ್ಚರಿಕಾ ಕ್ರಮವಾಗಿ ನಾಪೋಕ್ಲು ಗ್ರಾಮ ಪಂಚಾಯಿತಿ ವತಿಯಿಂದ ಪಂಚಾಯತಿ ವ್ಯಾಪ್ತಿಯಲ್ಲಿ ಧ್ವನಿವರ್ಧಕದ ಮೂಲಕ ಅನಗತ್ಯವಾಗಿ ಸಾರ್ವಜನಿಕರು ಮನೆಯಿಂದ ಹೊರಬರದಂತೆ ಹಾಗೂ ಎಚ್ಚರಿಕೆಯಿಂದ ಇರುವಂತೆಯು ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲಿಸಬೇಕು, ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು,
ಮಕ್ಕಳು ವಯಸ್ಕರು ಯಾವುದೇ ಕಾರಣಕ್ಕೂ ಮನೆಯಿಂದ ಹೊರ ಬರಬಾರದು,
ಅಂಗಡಿ ಮುಂಗಟ್ಟುಗಳಲ್ಲಿ ಜನ ಗುಂಪು ಸೇರ ಬಾರದು,
ಸೇರಿದರೆ ಅಂತಹ ಅಂಗಡಿ ಮಾಲೀಕರಿಗೆ ಪಂಚಾಯತಿ ಹಾಗೂ ಪೊಲೀಸ್ ಇಲಾಖೆಯಿಂದ ದಂಡ ವಿಧಿಸುದಾಗಿ
ತಿಳಿಸಲಾಯಿತು.

No comments
Post a Comment